Categories: ರಾಮನಗರ

ಮಾರ್ಚ್ 12 ರಂದು ರಾಮನಗರದಲ್ಲಿ ಇ-ಲೋಕ ಅದಾಲತ್

ರಾಮನಗರ: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಮಾರ್ಚ್ 12 ರಂದು  ನಡೆಯುವ ಇ-ಲೋಕ ಅದಾಲತ್ ನಲ್ಲಿ ಇತ್ಯರ್ಥಗೊಳಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಇ-ಲೋಕ ಅದಾಲತ್ ಅದಾಲತ್ ನ ಕುರಿತು ಸೋಮವಾರ ಮಾಹಿತಿ ನೀಡಿದ ಅವರು, ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಾದ್ಯಂತ ಇರುವ 20 ಬೆಂಚ್‌ಗಳಲ್ಲಿ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ. ರಾಜಿ ಸಂದಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲೆಯಾದ್ಯಂತ ಇರುವ ಜಿಲ್ಲಾ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಮಾ. 12 ರಂದು ಏಕಕಾಲಕ್ಕೆ ಮೆಗಾ ಲೋಕ ಅದಾಲತ್‌ನ ಕಲಾಪಗಳು ನಡೆಯಲಿವೆ. ಕಕ್ಷಿದಾರರನ್ನು ಹೊರತು ಪಡಿಸಿದರೆ, ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ  ಭಾಗವಹಿಸಬಹುದು. ಇಲ್ಲವೆ ಆನ್‌ಲೈನ್ ಮೂಲಕವೂ ಭಾಗವಹಿಸಬಹುದು. ಅವಶ್ಯಕತೆ ಕಂಡು ಬಂದಲ್ಲಿ ಕಕ್ಷಿದಾರರನ್ನು ಆನ್‌ಲೈನ್ ಮೂಲಕ ಸಂಪರ್ಕಿಸಲಾಗುವುದು ಎಂದು ಸತ್ರ ನ್ಯಾಯಾಧೀಶರು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ         ಬಿ. ವೆಂಕಟಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ೪೫,೫೮೪ ಪ್ರಕರಣಗಳು ಬಾಕಿ ಇದ್ದು, ಇವುಗಳ ಪೈಕಿ ವಿವಿಧ ಪ್ರಕರಣಗಳನ್ನು  ಮೆಗಾ ಲೋಕ ಅದಾಲತ್‌ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ನ್ಯ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಕ್ರಿಮಿನಲ್ ಪ್ರಕರಣಗಳು, ನೆಗೋಷಲ್ ಇನ್ಸ್‌ಟ್ರೂಮೆಂಟ್ ಕಾಯಿದೆ ಪ್ರಕರಣಗಳು, ಸಾಲ ವಸೂಲಾತಿ, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಅಪಘಾತ,  ಕಾರ್ಮಿಕ ವಿವಾದ ಪ್ರಕರಣಗಳು, ಗಣಿ ಮತ್ತು ಭೂ ವಿಜ್ಞಾನ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು, ನಿರ್ಧಿಷ್ಟ ಹಾಗೂ ಜಾರಿ ಪ್ರಕರಣಗಳು.

ಹಕ್ಕು ಘೋಷಣೆ, ಶಾಶ್ವತ ನಿರ್ಭಂದಕಾಜ್ಞೆ ಹಾಗೂ ಇತರೆ ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸದ ಪ್ರಕರಣಗಳು, ಲಘು ವಾಜ್ಯ ಪ್ರಕರಣಗಳು ಇತರೆ ಕ್ರಿಮಿನಲ್ ಪ್ರಕರಣಗಳು, ಭೂಸ್ವಾಧೀನ ಜಾರಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ಕೌಟುಂಬಿಕ ದೌರ್ಜಜ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಗೆ ಸಂಬಂದಿಸಿದ ಪ್ರಕರಣಗಳು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿಗಾಗಿ ನಿಗದಿಪಡಿಸಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಟಪ್ಪ ತಿಳಿಸಿದರು.

Sneha Gowda

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

14 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

40 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

48 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago