Categories: ರಾಮನಗರ

ರಾಜ್ಯದ ಜನ ಮುಂದಿನ ದಿನಗಳಲ್ಲಿ ಜೆಡಿಎಸ್ ಬೆಂಬಲಿಸ್ತಾರೆ: ಅನಿತಾ ಕುಮಾರಸ್ವಾಮಿ

ರಾಮನಗರ: ರಾಷ್ಟ್ರೀಯ ಪಕ್ಷಗಳ ದುರಾಡಳಿತ ಹಾಗೂ ಜಾತಿ ರಾಜಕಾರಣದಿಂದ ಬೇಸತ್ತಿರುವ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ಜೆಡಿಎಸ್ ನ್ನು ಬೆಂಬಲಿಸಲಿದ್ದಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ತಾಲೂಕಿನ ಕಸಬಾ ಹಾಗೂ ಕೈಲಾಂಚ ಹೋಬಳಿಯ ನಾನಾ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಮತದಾರರು ಜೆಡಿಎಸ್ ಪರ ವಾಲಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು 2022ರಲ್ಲಿ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಇದಕ್ಕೆ ಇತ್ತೀಚೆಗೆ ಜೆಡಿಎಸ್ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಗಂಗಾಯಾತ್ರೆ ಅಭೂತಪೂರ್ವ ಯಶಸ್ಸು ಗಳಿಸಿರುವುದೇ ಸಾಕ್ಷಿಯಾಗಿದೆ ಎಂದರು.

ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಜಾತಿ-ಧರ್ಮಗಳ ನಡುವೆ ದ್ವೇಷದ ವಾತಾವರಣ ನಿರ್ಮಿಸಿ, ಮತ ಗಿಟ್ಟಿಸುವುದು ಈ ರಾಷ್ಟ್ರೀಯ ಪಕ್ಷಗಳ ತಂತ್ರವಾಗಿದೆ. ಸಾಮರಸ್ಯದಿಂದ ಜೀವನ ನಡೆಸುತ್ತಿದ್ದವರು ಇಂದು ಶತ್ರುಗಳಂತೆ ವರ್ತಿಸುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಜನರು ಶಾಂತಿ, ಸಹಬಾಳ್ವೆಯಿಂದ ಜೀವನ ನಡೆಸುವಂತಹ ವಾತಾವರಣ ಸೃಷ್ಟಿಯಾಗಬೇಕಾದರೆ ಕುಮಾರಸ್ವಾಮಿ ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿಯುವುದು ಅನಿವಾರ್ಯವಾಗಿದೆ. ಜನರೂ ಕೂಡ ರಾಷ್ಟ್ರೀಯ ಪಕ್ಷಗಳ ಕುತಂತ್ರಗಳನ್ನು ಅರಿತುಕೊಂಡಿದ್ದು ಜೆಡಿಎಸ್ ಬೆಂಬಲಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ, ಆಶಾ ಕಾರ್ಯರ್ತೆಯರ ಸಮಸ್ಯೆಗಳನ್ನು ನಿವಾರಿಸಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಕೆಲಸವನ್ನು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಮಾಡಲಿದೆ. ರಾಜ್ಯದ ನೆಲ, ಜಲ, ಗಡಿ ರಕ್ಷಣೆ ವಿಚಾರವಾಗಿ ರಾಜಿಯಾಗದೆ ಜನಪರ ಆಡಳಿತ ಜೆಡಿಎಸ್ ಪಕ್ಷದಿಂದ ಮಾತ್ರ ನೀಡಲು ಸಾಧ್ಯ ಎಂದು ಹೇಳಿದರು.

ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್, ಜಿಪಂ ಮಾಜಿ ಅಧ್ಯಕ್ಷ ಎಚ್.ಸಿ.ರಾಜು, ಮುಖಂಡರಾದ ರಾಮಕೃಷ್ಣ, ಜಯರಾಮು, ಬಿ.ಟಿ.ಕೃಷ್ಣ, ಮಹದೇವು, ಶಿವರಾಮ, ಹನುಮಂತು, ಜಯಕುಮಾರ್, ಹರೀಸಂದ್ರ ಗ್ರಾಪಂ ಅಧ್ಯಕ್ಷೆ ಆಶಾ ಮಂಚೇಗೌಡ ಮತ್ತಿತರರು ಹಾಜರಿದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago