ರಾಮನಗರ

ರಾಮನಗರದಲ್ಲಿ ಸಿಡಿಲು ಮಳೆಗೆ ಭಾರೀ ಹಾನಿ

ರಾಮನಗರ: ತಾಲೂಕಿನಲ್ಲಿ ಸಿಡಿಲು, ಗುಡುಗು ಸಹಿತ ಸುರಿದ ಭಾರಿ ಮಳೆಗೆ ಬಿಡದಿ ಹೋಬಳಿ ಬೆತ್ತಂಗೆರೆ ಗ್ರಾಮದಲ್ಲಿ ಮರವೊಂದರ ಕೆಳಗೆ ನಿಂತಿದ್ದ 16 ಕುರಿ ಮತ್ತು ಮೇಕೆಗಳು ಸಿಡಿಲು ಬಡಿದು ಸಾವನ್ನಪ್ಪಿದ್ದರೆ, ಇನ್ನು ಕೆಲವು ಕಡೆ ಮನೆಯ ಛಾವಣಿ ಹಾರಿ ಹೋಗಿದ್ದು, ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು ಭಾರೀ ನಷ್ಟವಾಗಿದೆ.

ಬಿಡದಿ ಹೋಬಳಿ ಬನ್ನಿಕುಪ್ಪೆ(ಬಿ) ಗ್ರಾಪಂ ವ್ಯಾಪ್ತಿಯ ಬೆತ್ತಂಗೆರೆ ಗ್ರಾಮದಲ್ಲಿ  ಮಳೆ ಕಾರಣ ರೈತರು ತಮ್ಮ ಕುರಿ, ಮೇಕೆಗಳನ್ನು  ಮರವೊಂದರ ಕೆಳಗೆ ಕಟ್ಟಿದ್ದರು. ತಾವೆಲ್ಲ ಮತ್ತೊಂದು ಮರದ ಕೆಳಗೆ ಆಶ್ರಯ ಪಡೆದಿದ್ದರು. ಸಿಡಿಲು ಅಪ್ಪಳಿಸಿದ ಪರಿಣಾಮ ಕುರಿ ಮತ್ತು ಮೇಕೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ. ಸಮೀಪದ ಮರದ ಕೆಳಗೆ ನಿಂತಿದ್ದ ಮೂರು ಮಂದಿ ರೈತರು ಅದೃಷ್ಠವಶಾತ್ ದುರಂತದಿಂದ ಪಾರಾಗಿದ್ದಾರೆ.

ಕುರಿ, ಮೇಕೆಗಳನ್ನು ಪಾಲನೆ ಮಾಡುತ್ತಿದ್ದ ಬಡಕುಟುಂಬಗಳಿಗೆ ಅಂದಾಜು 2 ಲಕ್ಷ ರೂ ನಷ್ಟ ಉಂಟಾಗಿದೆ. ವಿಷಯ ತಿಳಿದ ಬನ್ನಿಕುಪ್ಪೆ ಗ್ರಾಪಂ ಅಧ್ಯಕ್ಷೆ ಸುಮತಿ ನಾಗರಾಜು ಮತ್ತು ಉಪಾಧ್ಯಕ್ಷ ರೇವಣಸಿದ್ದಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಣಕಲ್ ಪಶು ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಕಂದಾಯ ಇಲಾಖೆ ರಾಜಸ್ವನಿರೀಕ್ಷರು ಸ್ಥಳದಲ್ಲಿ ಹಾಜರಿದ್ದರು.

ಬಿಡದಿ ಹೋಬಳಿ ಭೈರಮಂಗಲ ಗ್ರಾಪಂ ವ್ಯಾಪ್ತಿಯ ಕೋಡಿಪುರ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಸಿಲುಕಿ ಐಯಲಗಯ್ಯ ಎಂಬುವರಿಗೆ ಸೇರಿದ ರೇಷ್ಮೆ ಸಾಕಣೆ ಮನೆಯ ಚಾವಣಿ ಹಾರಿಹೋಗಿದೆ. ಏಕಾಏಕಿ ಬೀಸಿದ ಬಿರುಗಾಳಿ ರಭಸಕ್ಕೆ ರೇಷ್ಮೆ ಸಾಕಣೆ ಮನೆಯ ಚಾವಣಿಗೆ ಅಳವಡಿಸಿದ್ದ ಶೀಟ್‌ಗಳು ಸಂಪೂರ್ಣ ಹಾರಿಹೋಗಿದ್ದು ಮನೆ ಬೋಳು ಬೋಳಾಗಿದೆ. ಇದರಿಂದ ಸಾವಿರಾರು ನಷ್ಟ ಸಂಭವಿಸಿದೆ ಎಂದು ರೈತ ಐಯಲಗಯ್ಯ ಅಳಲು ತೋಡಿಕೊಂಡಿದ್ದಾರೆ.

ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಕೂನಮುದ್ದನಹಳ್ಳಿ ಕ್ರಾಸ್ ಬಳಿ ಮಾಗಡಿ ರಸ್ತೆಯಲ್ಲಿ ಭಾರಿ ಮರ ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ.ಭಾನುವಾರ ಸಂಜೆ ಸುರಿದ ಮಿಂಚು, ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಗೆ ರಾಮನಗರ-ಮಾಗಡಿ ರಸ್ತೆಯ ಕೂನಮುದ್ದನಹಳ್ಳಿ ಕ್ರಾಸ್ ಬಳಿ ಅರಳಿ ಮರವೊಂದು ಧರೆಗೆ ಉರುಳಿದೆ. ಮರದ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿಗಳು ಎಳೆದುಕೊಂಡಿದೆ. ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಸಹ ಮುರಿದು ರಸ್ತೆಗೆ ಉರುಳಿ ಬಿದ್ದಿವೆ.

ಬಿಡದಿ ಹೋಬಳಿಯ ಭೈರಮಂಗಲ ಹೊಸೂರು ಸುತ್ತಮುತ್ತಲ ಪ್ರದೇಶದಲ್ಲಿ ಬಿರುಗಾಳಿ ಸಹಿತ ಅಲಿಕಲ್ಲು ಮಳೆ ಸುರಿದಿದ್ದು, ಮಳೆ ಗಾಳಿಯ ರಭಸಕ್ಕೆ ಪಾಲ್‌ಹೌಸ್‌ಗಳು ಹಾಗೂ ಮಾವು ಬೆಳೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಅಲ್ಲದೆ ಕೆಲವು ಕಡೆ ಬೆಳೆದು ನಿಂತಿದ್ದ ಬಾಳೆ ಬೆಳೆ ನೆಲಕ್ಕುರುಳಿದೆ. ಗಾಳಿ ಮಳೆಗೆ ಮಾವು ಬೆಳೆ ಉದುರಿದ್ದು ರೈತರಿಗೆ ಭಾರಿ ನಷ್ಟ ಉಂಟಾಗಿದೆ.

ಮಿಂಚು, ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸುರಿದ ಪರಿಣಾಮ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಗಿತ್ತು. ಮಳೆ ನಿಂತ ನಂತರ ಅಲ್ಲಲ್ಲಿ ನಿಲ್ಲಿಸಿದ್ದ ವಾಹನಗಳು ಒಟ್ಟಿಗೆ ರಸ್ತೆಗಿಳಿದಾಗ ಸಂಚಾರ ದಟ್ಟಣೆ ಹೆಚ್ಚಾಯಿತು. ಕೆಲವು ಕಡೆ ವಾಹನಗಳ ಸಂಚಾರ ಅಸ್ತವ್ಯಸ್ತವಾದ ಪ್ರಸಂಗವೂ ನಡೆಯಿತು.

Sneha Gowda

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

10 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

46 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago