Categories: ರಾಮನಗರ

ರೈತನ ಮೇಲೆ ನಡೆದ ಹಲ್ಲೆ ಯತ್ನ ಪ್ರಕರಣ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ-ಎಚ್ಡಿಕೆ

ರಾಮನಗರ : ಇಲ್ಲಿನ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಹಾವೇರಿ ರೈತ ವಿರೂಪಾಕ್ಷಪ್ಪ ಎಂಬುವರ ಮೇಲೆ ನಡೆದ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದರು.

ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅವರೊಂದಿಗೆ ಶನಿವಾರ ದೂರವಾಣಿ ಮೂಲಕ ಚರ್ಚಿಸಿದ ಅವರು, ‘ದೂರದ ಊರಿನಿಂದ ಬಂದಿರುವ ರೈತನ ಮೇಲೆ ಇಲ್ಲಿನ ರೀಲರ್‌ ಹಲ್ಲೆಗೆ ಮುಂದಾಗಿದ್ದು ದುರಂತ. ಮಾರುಕಟ್ಟೆಯಲ್ಲಿ ರೈತರಿಗೆ ಸೂಕ್ತ ರಕ್ಷಣೆ ಇಲ್ಲ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿಬರುತ್ತಿದೆ. ಇಂತಹ ಘಟನೆಗಳು ಮರುಕಳಿಸದಂತೆ ಬಿಗಿ ಕ್ರಮ ಕೈಗೊಳ್ಳಬೇಕು. ರೇಷ್ಮೆಗೂಡು ಹರಾಜು ನಡೆಯುವ ಅವಧಿಯಲ್ಲಿ ರೈತರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ಮಾರುಕಟ್ಟೆಯಲ್ಲಿ ಹರಾಜು ನಡೆಯುವ ಸಂದರ್ಭದಲ್ಲಿ ರೇಷ್ಮೆಗೂಡನ್ನು ಬೇರ್ಪಡಿಸುವುದು, ಗೂಡನ್ನು ಕದಿಯುವ ಘಟನೆಗಳು ಆಗಿಂದ್ದಾಗ್ಗೆ ನಡೆಯುತ್ತಿರುವುದು ಬೇಸರದ ಸಂಗತಿ. ಮಧ್ಯವರ್ತಿಗಳಿಗೆ ಪ್ರವೇಶ ನೀಡಬಾರದು. ರೀಲರ್‌ಗಳ ಸಭೆ ಕರೆದು ಈ ಬಗ್ಗೆ ಎಚ್ಚರಿಕೆ ನೀಡಬೇಕು’ ಎಂದು ಸೂಚಿಸಿದರು.

ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಹ ಟ್ವೀಟ್‌ ಮಾಡಿದ್ದು, ‘ಪ್ರಕರಣ ಬೆಳಕಿಗೆ ಬರುತ್ತಲೇ ಆರೋಪಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ರಾಮನಗರ ಜಿಲ್ಲಾ ಪೊಲೀಸರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ದೂರಿಗೆ ಸ್ಪಂದಿಸಿ ಕ್ರಮ ಕೈಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ರೀಲರ್‌ ಪ್ರವೇಶಕ್ಕೆ ನಿರ್ಬಂಧ: ಇದೇ 12ರಂದು ಹಾವೇರಿ ಜಿಲ್ಲೆಯ ವಿರೂಪಾಕ್ಷಪ್ಪ ಎಂಬ ರೈತನ ಮೇಲೆ ಗೂಡು ಮಾರುಕಟ್ಟೆಯಲ್ಲಿ ರೀಲರ್‌ ಮುನೀರ್ ಅಹಮ್ಮದ್ ಎಂಬುವರು ಹಲ್ಲೆ ಯತ್ನ ನಡೆಸಿದ್ದು, ಆರೋಪಿ ವಿರುದ್ಧ ಐಜೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿರೂಪಾಕ್ಷಪ್ಪ ತಂದಿದ್ದ ರೇಷ್ಮೆಗೂಡು ಆನ್‌ಲೈನ್‌ ಹರಾಜಿನಲ್ಲಿ ಪ್ರತಿ ಕೆ.ಜಿ.ಗೆ ₹550 ದರದಲ್ಲಿ ಮಾರಾಟ ಆಗಿತ್ತು. ಈ ಹರಾಜು ಪಡೆದಿದ್ದ ರೀಲರ್ ರೈತನ ಬಳಿ ಬಂದು ‘ನಾನು ತಪ್ಪಾಗಿ ಪ್ರತಿ ಕೆ.ಜಿ.ಗೆ ₹550 ದರ ನಮೂದು ಮಾಡಿದ್ದೇನೆ. ಪ್ರತಿ ಕೆ.ಜಿ.ಗೆ ₹100 ರಂತೆ ಹಣ ಕಡಿತ ಮಾಡಿ ಉಳಿದಿದ್ದನ್ನು ಕೊಡುತ್ತೇನೆ. ಹಾಗೆಯೇ ವೇಸ್ಟೇಜ್‌ ಲೆಕ್ಕದಲ್ಲಿ 4 ಕೆ.ಜಿ. ಗೂಡಿನ ಹಣ ಕೊಡುವುದಿಲ್ಲ’ ಎಂದಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ವಿರೂಪಾಕ್ಷಪ್ಪ, ‘ಹಾಗೆ ಮಾಡಬೇಡಿ. ಬೇಕಿದ್ದರೆ ನಿಮ್ಮ ಹರಾಜು ಹಿಂಪಡೆಯಿರಿ’ ಎಂದು ರೀಲರ್‌ಗೆ ಕೈ ಮುಗಿದಿದ್ದರು. ಈ ಸಂದರ್ಭ ರೀಲರ್‌ ಮತ್ತವರ ಬೆಂಬಲಿಗರು ವಿರೂಪಾಕ್ಷಪ್ಪ ಅವರನ್ನು ನಿಂದಿಸಿ, ಹಲ್ಲೆಗೂ ಯತ್ನಿಸಿದ್ದರು ಎಂದು  ದೂರಲಾಗಿದೆ.

ರೇಷ್ಮೆಗೂಡು ಮಾರುಕಟ್ಟೆ ಉಪ ನಿರ್ದೇಶಕ ಮಾರಪ್ಪ ಬೀರಲದಿನ್ನಿ ಹಾಗೂ ರೈತ ವಿರೂಪಾಕ್ಷಪ್ಪ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಆರೋಪಿ ರೀಲರ್ ಅನ್ನು ಸದ್ಯ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲಾಗಿದೆ ಎಂದು ಮಾರುಕಟ್ಟೆ ಅಧಿಕಾರಿಗಳು ತಿಳಿಸಿದರು.

Gayathri SG

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

8 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

16 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

32 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

39 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

57 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago