Categories: ರಾಮನಗರ

ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಪೂರಕ

ಚನ್ನಪಟ್ಟಣ :  ಮಕ್ಕಳು ಶಿಕ್ಷಣದಿಂದ ವಿಮುಖರಾಗದಂತೆ ನೋಡಿಕೊಳ್ಳುವುದು ಪೋಷಕರು ಮತ್ತು ಶಿಕ್ಷಣ ಇಲಾಖೆಯ ಕರ್ತವ್ಯ ಎಂದು ಪರಿಸರ ಪ್ರೇಮಿ ಡಾ.ಮಲವೇಗೌಡ ತಿಳಿಸಿದರು.

ತಾಲ್ಲೂಕಿನ ಹರಿಸಂದ್ರ ಗ್ರಾಮದ ಬಳಿಯ ಕಟ್ಟಡ ನಿರ್ಮಾಣ ಕಾರ್ಮಿಕರ ಟೆಂಟ್ ಆವರಣದಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಶನಿವಾರ ಏರ್ಪಡಿಸಿದ್ದ ವಾರದ ಕಲಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಾ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಪ್ರೇರೇಪಿಸಬೇಕು. ಇದು ಮಕ್ಕಳಲ್ಲಿ ಜೀವನ ಮೌಲ್ಯ ಅಳವಡಿಸಿಕೊಂಡು ಜವಾಬ್ದಾರಿಯುತ ನಾಗರಿಕರನ್ನಾಗಿಸುತ್ತದೆ. ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಣ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದರು.

ಸಮಾಜ ಸೇವಕ ಡಾ.ಟಿ.ವಿ. ಶಂಕರ್ ವರದಪ್ಪ ಮಾತನಾಡಿ, ಬಡತನದ ಕಾರಣದಿಂದ ಮಕ್ಕಳ ಶೈಕ್ಷಣಿಕ ಹಕ್ಕುಗಳನ್ನು ಮೊಟಕುಗೊಳಿಸುವುದು ಬೇಡ. ಮಕ್ಕಳ ದೈಹಿಕ ಮತ್ತು ಮಾನಸಿಕ ಸಮತೋಲನದ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಮಕ್ಕಳು ದೇಶದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ಥಿತಿ ಬಗ್ಗೆ ತಿಳಿಯಲು ಮತ್ತು ಸಮಸಮಾಜ ನಿರ್ಮಾಣಕ್ಕೆ ಶಿಕ್ಷಣ ಮೂಲಭೂತವಾಗಿಬೇಕು. ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸುವ ಮೂಲಕ ಸದೃಢ ಮತ್ತು ಸ್ವಚ್ಛ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದರು.

ಟ್ರಸ್ಟ್ ಕಾರ್ಯದರ್ಶಿ ವಿಜಯ್ ರಾಂಪುರ ಮಾತನಾಡಿ, ಮಕ್ಕಳು ನಮ್ಮ ರಾಷ್ಟ್ರದ ಸಂಪತ್ತು. ವಲಸೆ ಕಾರ್ಮಿಕರು, ಅಲ್ಲಿನ ಸ್ಥಳೀಯ ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಮಾಡಿಸಬೇಕು. ನಮ್ಮ ಟ್ರಸ್ಟ್ ವತಿಯಿಂದ ವಾರದ ಕಲಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮಕ್ಕಳ ಕಲಿಕೆಯ ಜೊತೆಗೆ ಹಲವು ಚಟುವಟಿಕೆಗಳ ಮೂಲಕ ಶಿಕ್ಷಣದಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಜಾನಪದ ಗಾಯಕ ಚೌ.ಪು. ಸ್ವಾಮಿ, ಮೊಗಳ್ಳಿ ರಾಜು ಸಾಕ್ಷರ ಗೀತೆಗಳನ್ನು ಹಾಡಿದರು. ಟ್ರಸ್ಟ್ ವತಿಯಿಂದ ಮಕ್ಕಳಿಗೆ ನೋಟ್ ಬುಕ್‌, ಪೆನ್ ಮತ್ತು ಮಾಸ್ಕ್ ವಿತರಿಸಲಾಯಿತು

Gayathri SG

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

7 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

19 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

42 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

59 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago