Categories: ರಾಮನಗರ

ಸರ್ಕಾರಿ ಶಾಲೆಗಳಲ್ಲಿ ಬಿಜೆಪಿ ಪಕ್ಷದ ಹಲವು ನಾಯಕರ ಮಕ್ಕಳು ಓದಿದ್ದಾರೆ: ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ

ರಾಮನಗರ: ಸರ್ಕಾರಿ ಶಾಲೆಗಳಲ್ಲಿ ಬಿಜೆಪಿ ಪಕ್ಷದ ಹಲವು ನಾಯಕರ ಮಕ್ಕಳು ಓದಿದ್ದಾರೆ. ಆದರೆ ಅವರ ಮನೆ ಮಕ್ಕಳು ಓದುತ್ತಿದ್ದಾರಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಟಾಂಗ್ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಯಾವ ಮುಖಂಡರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆಂದು ಕುಮಾರಸ್ವಾಮಿ ಅವರು ಇವತ್ತು ಪ್ರಶ್ನೆ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಹಲವು ನಾಯಕರು  ಸರ್ಕಾರಿ ಶಾಲೆಯಲ್ಲಿಯೇ ಓದಿದ್ದಾರೆ. ಈಗ ಅವರ ಮಕ್ಕಳು ಸಹ ಓದುತ್ತಿದ್ದಾರೆ. ಇದಕ್ಕೆ ಸಾಕಷ್ಟು ಉದಾಹರಣೆಯಿವೆ. ಶಾಲಾ ಕಾಲೇಜುಗಳಲ್ಲಿ ಶಾಂತಿ ಕಾಪಾಡಲು ಸ್ಪಷ್ಟ ನಿಲುವು ತೆಗೆದುಕೊಂಡಿದ್ದೇವೆ ಎಂದರು.

ಶಾಲಾ ಸಮವಸ್ತ್ರ ಕುರಿತಂತೆ 1995 ರಲ್ಲಿ ಕಾನೂನು ತಂದಿರುವವರು ಯಾರು?  ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇದೆ. ಅಲ್ಲಿ ಏನು ನಿಲುವು ತೆಗೆದುಕೊಂಡಿದ್ದಾರೆ. ಯಾವ ಶಾಲೆಯಾದರೂ ಸಹ ಅಲ್ಲಿ ಧಾರ್ಮಿಕ ಸಮವಸ್ತ್ರಕ್ಕೆ ಅವಕಾಶ ಇಲ್ಲ. ಸರ್ಕಾರಿ ಆಗಲಿ, ಖಾಸಗಿ ಶಾಲೆಯೇ ಆಗಲಿ ಅವಕಾಶ ಇಲ್ಲ.

ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರಿಗೂ ಈ ಕಾನೂನು ಅನ್ವಯವಾಗಲಿದೆ. ಎಲ್ಲದರಲ್ಲಿಯೂ ರಾಜಕೀಯ ಮಾಡುವುದನ್ನು ಬಿಟ್ಟು ಸ್ಪಷ್ಟ ನಿಲುವು ತೆಗೆದುಕೊಳ್ಳಲಿ. ನ್ಯಾಯಾಲಯ ಸ್ಪಷ್ಟ ನಿಲುವು ಕೊಟ್ಟಿದೆ. ಮಕ್ಕಳಲ್ಲಿ ಕುತೂಹಲ ಇರುತ್ತದೆ, ಯಾರೊ ಒಬ್ಬರು ಮಾಡುತ್ತಾರೆ ಅಂತಾ ಮಕ್ಕಳು ಸಹ ಅದನ್ನೇ ಮಾಡುತ್ತಾರೆ ಎಂದರು.

ಹಿಜಾಬ್ ಗಲಾಟೆಯ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜಿನಲ್ಲಿ ಮೊಬೈಲ್ ಬಳಕೆ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಇದು ಡಿಜಿಟಲ್ ಯುಗ, ಕಲಿಕೆಗೂ ಅಗತ್ಯತೆಯಿದ್ದು  ಸಕಾರಾತ್ಮಕ ಹಾಗೂ ನಕಾರಾತ್ಮಕವೂ ಇದೆ. ಕೆಲವು ಚಟುವಟಿಕೆಗಳಿಗೆ ನಿರ್ಬಂಧ ತರುವುದನ್ನು ಮಾಡುತ್ತೇವೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

Swathi MG

Recent Posts

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

12 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

37 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

53 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

1 hour ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

2 hours ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago