Categories: ರಾಮನಗರ

ಸರ್ವ ಜನಾಂಗದ ಶಾಂತಿಯ ತೋಟ ಹೊತ್ತಿ ಉರಿಯುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಮನಗರ : ಸರ್ವ ಜನಾಂಗದ ಶಾಂತಿಯ ತೋಟ ಹೊತ್ತಿ ಉರಿಯುತ್ತಿದೆ. ಇಡೀ ಹಿಂದು- ಮುಸ್ಲಿಂ ಸಮುದಾಯದ ನಡುವೆ ಬಿರುಕು ಮೂಡಿಸುವ ಪ್ರಯತ್ನ ನಡೆದಿದೆ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಶನಿವಾರ ಜೆಡಿಎಸ್ ಕಾರ್ಯಕರ್ತರ ಸಭೆ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ಮುಸ್ಲಿಮರಿಗೆ ನಾನಾ ಬಹಿಷ್ಕಾರ ಆಯಿತು. ಇದೀಗ ಅವರು ಓಡಿಸುವ ಟ್ಯಾಕ್ಸಿ, ಆಟೊ ಏರಬಾರದು ಎಂದು ಹೊಸತಾಗಿ ಅಭಿಯಾನ ಶುರುವಾಗಿದೆ. ಬಿಜೆಪಿಯವರೇ ಕೆಲ ಅಂಗ ಪಕ್ಷಗಳ ಮೂಲಕ ಹಿಂದೂ- ಮುಸ್ಲಿಂ ಸಮುದಾಯದ ನಡುವೆ ಬಿರುಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಎಲ್ಲಿಗೆ ಮುಟ್ಟುತ್ತದೆಯೋ ಗೊತ್ತಿಲ್ಲ. ಆದರೆ, ಇದೇ ಅವರಿಗೆ ತಿರುಗುಬಾಣ ಆಗಲಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಜನ ಬಾಗಿಲು ಮುಚ್ಚಲಿದ್ದಾರೆ’ ಎಂದರು.

‘ಪುರೋಹಿತರ ವಿಚಾರವಾಗಿ ನಾನು ಅಗೌರವವಾಗಿ ಮಾತನಾಡಿಲ್ಲ. ಆದರೆ, ಅವರು ತಮ್ಮ ಎಲ್ಲೆ ಮೀರಿ ಸಮಾಜದ ಸ್ವಾಸ್ಥ್ಯಕೆಡಿಸುವ ಮಾತು ಆಡಬಾರದು’ ಎಂದರು.

ಕಾಂಗ್ರೆಸ್ ಪಿತೂರಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಿತೂರಿಯಿಂದ ಮುಸ್ಲಿಮರು ಜೆಡಿಎಸ್‌ಗೆ ಹೆಚ್ಚು ಮತ ಹಾಕಲಿಲ್ಲ. ಇದರಿಂದ ನಾವು 38 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡೆವು. ಇಲ್ಲದಿದ್ದರೆ ಕನಿಷ್ಠ 70 ಸ್ಥಾನ‌ ಗೆಲ್ಲುತ್ತಿದ್ದೆವು ಎಂದು
ತಿಳಿಸಿದರು.

ಇದೇ 12ರ‌ಂದು ರಾಮನಗರದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಜಲಧಾರೆ ವಾಹನಗಳಿಗೆ ಚಾಲನೆ ನೀಡಲಾಗುವುದು. ಇದೇ 16ರಿಂದ ರಾಜ್ಯದಾದ್ಯಂತ ಜಲಧಾರೆ ಯಾತ್ರೆ ಆರಂಭಗೊಳ್ಳಲಿದೆ. ಮೇ 8ವರೆಗೆ 180 ತಾಲ್ಲೂಕುಗಳಲ್ಲಿ ಈ ಯಾತ್ರೆ ಸಂಚರಿಸಲಿದೆ ಎಂದು ವಿವರಿಸಿದರು.

Gayathri SG

Recent Posts

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

16 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

16 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

35 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

39 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

1 hour ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

1 hour ago