ರಾಮನಗರ

ನಮ್ಮ ಹೋರಾಟ ಮುಂದುವರಿಸುತ್ತೇವೆ, ಇದು ತಾತ್ಕಾಲಿಕ ಸ್ಥಗಿತವಷ್ಟೆ: ಡಿ ಕೆ ಶಿವಕುಮಾರ್

ರಾಮನಗರ: ಕಾವೇರಿ ನೀರಿಗಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ,ರಾಜ್ಯದ ಜನರೇ ನಮಗೆ ಮುಖ್ಯ, ಅವರ ಹಿತದೃಷ್ಟಿಯಿಂದ ಪಾದಯಾತ್ರೆಗೆ ತಾತ್ಕಾಲಿಕ ವಿರಾಮ ಹಾಕುತ್ತಿದ್ದೇವೆ ಹೊರತು ರಾಜ್ಯ ಸರ್ಕಾರದ ಕೇಸಿಗೆ ಹೆದರಿ ಅಲ್ಲ, ಜನತೆಗೆ ತಪ್ಪು ಸಂದೇಶ ಹೋಗಬಾರದು ಎಂಬುದು ನಮ್ಮ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ನಾಯಕರ ಜೊತೆ ಚರ್ಚೆ ನಡೆಸಿ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋವಿಡ್ ಮೂರನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ತಾತ್ಕಾಲಿಕ ಸ್ಥಗಿತ ನೀಡುತ್ತಿದ್ದೇವಷ್ಟೆ, ಮುಂದಿನ ದಿನಗಳಲ್ಲಿ ರಾಮನಗರದಿಂದಲೇ ಪಾದಯಾತ್ರೆ ಪುನರಾರಂಭಿಸುತ್ತೇವೆ, ಹಾಗೂ ಪಾದಯಾತ್ರೆ ಅಂತ್ಯ ಮಾಡಲು ನಿರ್ಧರಿಸಿದ ಸ್ಥಳದಲ್ಲಿಯೇ ಕೊನೆಗೊಳಿಸುತ್ತೇವೆ  ಎಂದರು.

ಕಾಂಗ್ರೆಸ್ ಹಳೆಯ ರಾಷ್ಟ್ರೀಯ ಪಕ್ಷವಾಗಿದ್ದು ಯಾವತ್ತಿಗೂ ಜನತೆಗೆ ಪರವಾಗಿ ನಿಂತಿದೆ, ಇನ್ನು ಮುಂದೆಯೂ ನಿಲ್ಲುತ್ತದೆ. ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ನಮಗೂ ಜವಾಬ್ದಾರಿಯಿದೆ.

ನಾಡು-ನುಡಿ, ಜಲ, ನೆಲದ ರಕ್ಷಣೆಯ ವಿಚಾರ ಬಂದಾಗ ಕಾಂಗ್ರೆಸ್ ಪಕ್ಷ ಹೋರಾಟದಲ್ಲಿ ಯಾವತ್ತಿಗೂ ಮುಂಚೂಣಿಯಲ್ಲಿರುತ್ತದೆ. ಹೋರಾಟ ಎಂಬುದು ಕಾಂಗ್ರೆಸ್ ಪಕ್ಷದ ರಕ್ತದಲ್ಲಿಯೇ ಇದೆ, ಇಂದು ತಾತ್ಕಾಲಿಕ ಸ್ಥಗಿತ ನೀಡಿದ್ದೆ ಹೊರತು ಮೇಕೆದಾಟು ಯೋಜನೆ ಪರ ನಮ್ಮ ಹೋರಾಟ ಈಡೇರುವವರೆಗೆ ಮುಂದುವರಿಯುತ್ತದೆ ಎಂದರು.

ಬಿಜೆಪಿಯವರು ಪಕ್ಷಪಾತಿಗಳಂತೆ ವರ್ತಿಸಬಾರದು. ಕೊರೋನಾ ಮೂರನೇ ಅಲೆ ಆರಂಭವಾಗಿದ್ದರೂ ಬಿಜೆಪಿಯವರ ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿರಲಿಲ್ಲ. ಆಗಲೇ ನಿರ್ಬಂಧ ಹೇರಿದ್ದರೆ 3ನೇ ಅಲೆ ಇಷ್ಟೊಂದು ಹರಡುವ ಸಾಧ್ಯತೆಯಿತ್ತೇ ಎಂದು ಪ್ರಶ್ನಿಸಿದರು.

ಮೂರು ದಿನ ಮೌನ ಎಂದಿದ್ದೇ. ವಿಧಿಯಿಲ್ಲದೇ ಇಂದು ಮೌನ ಮುರಿಯುತ್ತಿದ್ದೇನೆ. ಕೊರೊನಾ ಸೋಂಕಿತ ಡಿಸಿಯ ನೋಟಿಸ್​ ನೀಡಲು ಬಂದಿದ್ದರು. ರಾಮನಗರ ಎಸಿ, ಡಿವೈಎಸ್​ಪಿ ನೋಟಿಸ್ ನೀಡಲು ಬಂದಿದ್ದರು. ಕೊರೊನಾ ಹಿನ್ನೆಲೆ ಡಿಸಿ ಮನೆಯಿಂದ ಹೊರಬಂದಿರಲಿಲ್ಲ. ಆದರೆ ಸೋಂಕಿತ ಡಿಸಿ ಸಹಿಯುಳ್ಳ ನೋಟಿಸ್​ ನೀಡಿದ್ದಾರೆ.

ನಿಮ್ಮ ಹೋರಾಟದ ವೇಳೆ ಜನರಿಗೆ ಸಮಸ್ಯೆ ಆಗಬಾರದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪಾದಯಾತ್ರೆ ಸಾಗುತ್ತೆ. ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ರಸ್ತೆ ಬದಿ ನಡೆಯಿರಿ ಎಂದು ಡಿಸಿ ನೋಟಿಸ್​ ಉಲ್ಲೇಖವಾಗಿದ್ದ ಅಂಶಗಳ ಬಗ್ಗೆ ಕೂಡ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದರು. ಮತ್ತೊಂದೆಡೆ ಎಸ್​ಪಿಗೆ ಸೂಚಿಸಿದ್ದ ಜಿಲ್ಲಾಧಿಕಾರಿ ಪಾದಯಾತ್ರೆಗೆ ಬೇಕಾದ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದರು ಎಂದು ಕೂಡ ತಿಳಿಸಿದರು.

ಜನರ ದೃಷ್ಟಿಯಿಂದ ಪಾದಯಾತ್ರೆ ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಮತ್ತೆ ಇಲ್ಲಿಂದಲೇ ಪಾದಯಾತ್ರೆ ಪುನಾರಂಭ ಮಾಡುತ್ತೇವೆ. ಬೇಸರ ಅನ್ನೋದಕ್ಕಿಂತ ಜನರ ದೃಷ್ಟಿಯಿಂದ ಸ್ಥಗಿತಗೊಳಿಸಿದ್ದೇವೆ. ಶಾಸಕರು, ಕಾರ್ಯಕರ್ತರು ಪಾದಯಾತ್ರೆ ಯಶಸ್ವಿಗೊಳಿಸಿದ್ದಾರೆ ಎಂದು ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

Swathi MG

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

16 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago