ರಾಮನಗರ : ಜೆಡಿಎಸ್ ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ತಿಳಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಘೋಷಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು ಮೀಸಲಿಡಲಾಗುವುದು ಎಂದರು.