ರಾಮನಗರ

6 ವರ್ಷದಲ್ಲಿ ಹಸೆಮಣೆ ಏರಿದ 64 ಬಾಲಕಿಯರು: ಎಲ್ಲಿ ಗೊತ್ತ ?

ರಾಮನಗರ: ಜಿಲ್ಲೆಯಲ್ಲಿ ಕಳೆದ ಆರು ವರ್ಷಗಳಲ್ಲಿ ಸುಮಾರು 64 ಬಾಲ್ಯವಿವಾಹಗಳು ವರದಿಯಾಗಿವೆ. ಸಂಸಾರ ಮತ್ತು ಕುಟುಂಬದ ಕಲ್ಪನೆಯೇ ಗೊತ್ತಿಲ್ಲದ ಬಾಲಕ-ಬಾಲಕಿಯರನ್ನು ಈ ಆಧುನಿಕ ಕಾಲದಲ್ಲೂ ವಿವಾಹ ಬಂಧನಕ್ಕೆ ಒಳಪಡಿಸುವ ಪಿಡುಗು ಜಿಲ್ಲೆಯಲ್ಲಿ ಇಂದಿಗೂ ಜೀವಂತವಾಗಿದೆ.

ವಿವಿಧ ಕಾರಣಗಳಿಗಾಗಿ ಬಾಲ್ಯವಿವಾಹ ಪ್ರಕರಣಗಳು ವರದಿಯಾಗುತ್ತಲೇ ಇವೆ. ಜಿಲ್ಲೆಯಲ್ಲಿ ಇಂತಹ ಘಟನೆಗಳಲ್ಲಿ ಏರಿಳಿತಗಳಾಗುತ್ತಿವೆಯೇ ಹೊರತು, ನಿಯಂತ್ರಣಕ್ಕೆ ಮಾತ್ರ ಬಂದಿಲ್ಲ.

‘ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ (2022 ಮತ್ತು 2023ನೇ ವರ್ಷ) 125 ಬಾಲ್ಯವಿವಾಹ ಘಟನೆಗಳು ನಡೆದಿವೆ. ಈ ಪೈಕಿ, ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡವು ಸಕಾಲದಲ್ಲಿ ಸ್ಥಳಕ್ಕೆ ತೆರಳಿ ಸುಮಾರು 97 ಬಾಲ್ಯವಿವಾಹಗಳಿಗೆ ತಡೆಯೊಡ್ಡಿದೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ತಿಳಿಸಿದ್ದಾರೆ. ಇನ್ನು ‘ಕೆಲವರು ಗರ್ಭಿಣಿಯರಾದ ಬಳಿಕವೇ ಅವರು ಬಾಲ್ಯವಿವಾಹವಾಗಿರುವುದು ಗೊತ್ತಾಗುತ್ತದೆ.

ಆಸ್ಪತ್ರೆಗೆ ಬಂದಾಗ ಬೆಳಕಿಗೆ ಬರುವ ಇಂತಹ ಘಟನೆ ಕುರಿತು ಅಲ್ಲಿನ ಸಿಬ್ಬಂದಿ ನೀಡುವ ಮಾಹಿತಿ ಮೇರೆಗೆ, ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ’ ಎಂದು ತಿಳಿಸಿದರು.

Ashitha S

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

13 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

41 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

49 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

50 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

59 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago