ರಾಮನಗರ

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋರಿಕ್ಷಾ, ಟ್ರಾಕ್ಟರ್ ಸಂಚಾರ ಬಂದ್: ನಿಯಮ ಮೀರಿದರೆ 500 ರೂ. ದಂಡ

ರಾಮನಗರ: ವಿರೋಧದ ನಡುವೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋರಿಕ್ಷಾ ಮತ್ತು ಟ್ರಾಕ್ಟರ್ ವಾಹನಗಳ ಸಂಚಾರವನ್ನು ಆ.1ರ ದಿಂದ ಬಂದ್ ಮಾಡಲಾಗಿದೆ.

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಹಂತವಾಗಿ ಹಾಗೂ ಅಪಘಾತಗಳನ್ನು ನಿಯಂತ್ರಿಸುವ ಸಲುವಾಗಿ ನಿಯಮವನ್ನು ಜಾರಿಗೆ ತರಲಾಗಿದೆ. ಇನ್ನು ಮುಂದೆ ಎಕ್ಸ್ಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ಹಾಗೂ ಟ್ರಾಕ್ಟರ್ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದ್ದು ಸರ್ವೀಸ್ ರಸ್ತೆಯಲ್ಲಿ ಚಲಿಸುವುದು ಕಡ್ಡಾಯವಾಗಿದೆ. ನಿಯಮ ಮೀರಿದ ವಾಹನಗಳಿಗೆ ತಲಾ 500 ರೂ ವರೆಗೆ ದಂಡ ವಸೂಲು ಮಾಡಲು ನಿರ್ಧರಿಸಲಾಗಿದೆ.

ಎಕ್ಸ್ ಪ್ರೆಸ್ ವೇನಲ್ಲಿ ನಿಧಾನಗತಿಯ ವಾಹನಗಳ ಸಂಚಾರವನ್ನು ನಿಷೇಧಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ಮೋಟಾರ್ ವಾಹನ ಕಾಯ್ದೆ ಅನ್ವಯ ಜುಲೈ 12 ರಂದೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಿತ್ತು. ಅಲ್ಲದೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗದ ಎಡಿಜಿಪಿ ಅಲೋಕ್‌ಕುಮಾರ್ ಅವರು ಎರಡು ಬಾರಿ ಎಕ್ಸ್ಪ್ರೆಸ್ ವೇ ಪರಿಶೀಲನೆ ನಡೆಸಿ ಕೆಲವು ಸುರಕ್ಷತಾ ಮತ್ತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಹೀಗಾಗಿ ಎಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ ಮತ್ತು ಟ್ರಾಕ್ಟರ್ ವಾಹನಗಳ ಸಂಚಾರವನ್ನು ಆಗಸ್ಟ್ 01ರಿಂದ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸಣ್ಣ ಮತ್ತು ನಿಧಾನಗತಿಯ ವಾಹನಗಳಿಗೆ ಸಂಚಾರ ಬಂದ್ ಮಾಡಿದ ಹಿನ್ನೆಲೆಯಲ್ಲಿ ಸಂಗನಬಸವನದೊಡ್ಡಿ ಬಳಿಯಿರುವ ಎಕ್ಸಿಟ್ ಮತ್ತು ಎಂಟ್ರಿ ಸ್ಥಳಕ್ಕೆ ಸೋಮವಾರ ಬೆಳಿಗ್ಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್ ಆಟೋರಿಕ್ಷಾ ಸಂಚಾರ ಬಂದ್ ಹಿನ್ನೆಲೆಯಲ್ಲಿ ನಿಯಮ ಮೀರಿದವರಿಗೆ ಆಗಸ್ಟ್ 1ರಿಂದಲೇ ದಂಡ ಪ್ರಯೋಗ ಆರಂಭವಾಯಿತು. ವಾಹನ ಸವಾರರಿಗೆ ಮೂರು ನಾಲ್ಕು ದಿನ ತಿಳುವಳಿಕೆ ನೀಡಿ ನಂತರ ದಂಡ ಹಾಕಬಹುದೆಂದು ಊಹಿಸಲಾಗಿತ್ತು. ಆದರೆ ಮಂಗಳವಾರದಿಂದ ದಂಡ ಹಾಕುವಂತೆ ಪೊಲೀಸ್ ವರಿಷ್ಠಾಧಿಕಾರಿ ಖಡಕ್ ಸೂಚನೆ ನೀಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Gayathri SG

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

16 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

32 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

47 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago