News Karnataka Kannada
Saturday, May 04 2024
ರಾಮನಗರ

ಬಿಜೆಪಿ ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್‌ಗಳು: ವಿವಾದಾತ್ಮಕ ಹೇಳಿಕೆ ನೀಡಿದ ಹೆಚ್‌ಸಿ ಬಾಲಕೃಷ್ಣ

ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆಯೊಂದನ್ನ ನೀಡಿದ್ದಾರೆ. ಬಿಜೆಪಿ  ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್‌ಗಳು. ಕೇವಲ ದೆಹಲಿಗೆ  ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
Photo Credit : News Kannada

ರಾಮನಗರ: ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆಯೊಂದನ್ನ ನೀಡಿದ್ದಾರೆ. ಬಿಜೆಪಿ  ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್‌ಗಳು. ಕೇವಲ ದೆಹಲಿಗೆ  ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೇಂದ್ರದಿಂದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯಲ್ಲಿ ಹೋರಾಟ ವಿಚಾರ ಕುರಿತು ರಾಮನಗರದ  ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಅವರು, ಹೆಚ್ಚು ಟ್ಯಾಕ್ಸ್ ಕಟ್ಟುವ ಎರಡನೇ ರಾಜ್ಯ ನಮ್ಮ ಕರ್ನಾಟಕ. ಆದರೆ ನಮಗೆ ಕೊಡಬೇಕಾದ ಅನುದಾನವನ್ನು ಕೇಂದ್ರ ನಮಗೆ ಕೊಡುತ್ತಿಲ್ಲ.

ಬಿಜೆಪಿಯ ಸಂಸದರು ನರೇಂದ್ರ ಮೋದಿ  ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ. ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ ಎಂದು ಟೀಕೆ ಮಾಡಿದರು.

ಬಿಜೆಪಿ ಸಂಸದರೆಲ್ಲಾ ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಗೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಪರವಾಗಿ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡ್ತಿದ್ದೀವಿ. ಪಾಪ ನಮ್ಮ ಹೋರಾಟ ನೋಡಿ ಬಿಜೆಪಿಯ ಗಂಡಸರು ಹೋರಾಟ ಮಾಡ್ತಾರಾ ನೋಡೋಣ. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ. ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು