ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ನ ಜಂಪ್ ಮಾಡಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದೆ ಘಟನೆ ಬಿಡದಿ ಹೋಬಳಿಯ ಮಾದಾಪುರ ಗೇಟ್ ಬಳಿ ನಡೆದಿದೆ.
ಕಾರಿನ ಮುಂದಿನ ಭಾಗವೆಲ್ಲ ಫುಲ್ ಜಖಂ ಆಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಬೆಂಗಳೂರು ಕಡೆಗೆ ತೆರಳುತ್ತಿರುವಾಗ ಹೋಬಳಿಯ ಮಾದಾಪುರ ಗೇಟ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕೆಎಸ್ಆರ್ಟಿಸಿಯ ಅಶ್ಚಮೇಧ ಬಸ್ಗೆ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ರಾಮನಗರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.