News Karnataka Kannada
Thursday, May 02 2024
ರಾಮನಗರ

ಚನ್ನಪಟ್ಟಣ: ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗುತ್ತಾರೆ – ಅನಿತಾ ಕುಮಾರಸ್ವಾಮಿ

Kumaraswamy will become CM again: Anitha Kumaraswamy
Photo Credit : By Author

ಚನ್ನಪಟ್ಟಣ: ಜೆಡಿಎಸ್ ಪಕ್ಷದ ಜನಪರ ಆಡಳಿತ ಹಾಗೂ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ದಿ ಕಾರ್ಯಗಳಿಂದ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರು ಮತ್ತೆ ಜನರ ಆಶೀರ್ವಾದ ಪಡೆದು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಶಾಸಕಿ, ಪತ್ನಿ ಅನಿತಾಕುಮಾರಸ್ವಾಮಿ ವಿಶ್ವಾಸವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ಪ್ರಸಿದ್ದ ಶ್ರೀಕೆಂಗಲ್ ಅಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿರವರು ರಾಜ್ಯದ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಯು ನೀಡದ ಅಭಿವೃದ್ದಿಕಾರ್ಯಗಳನ್ನು ಮಾಡಿರುವ ಹಾಗೂ ರಾಜ್ಯದಲ್ಲಿ ತನ್ನದೇ ಆದ ಚಿಂತನೆಗಳ ಮುಖಾಂತರ ಸರ್ವಜನಾಂಗೀಯರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದು, ಕುಮಾರಸ್ವಾಮಿ ಅವರನ್ನು ಕ್ಷೇತ್ರದ ಜನರು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಕಾತುರತೆಯಿಂದ ಕಾಯುತ್ತಿದ್ದಾರೆ ಎಂದರು.

ಜೆಡಿಎಸ್ ಪಕ್ಷದ ಪಂಚರತ್ನಯಾತ್ರೆಯ ಮುಖಾಂತರ ರಾಜ್ಯದ ಜನತೆಯ ಮನಗೆದ್ದಿರುವ ಕುಮಾರಸ್ವಾಮಿರವರು ನುಡಿದಂತೆ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದರಲ್ಲಿ ಅನುಮಾನವೇ ಇಲ್ಲ, ರಾಜ್ಯದ ರೈತರಿಗೆ ಭರವಸೆ ನೀಡಿದಂತೆ 25 ಸಾವಿರ ಕೋಟಿ ಸಾಲವನ್ನು ಮನ್ನ ಮಾಡುವುದರ ಮುಖಾಂತರ ದೇಶದ ಮಾದರಿ ಮುಖ್ಯಮಂತ್ರಿಯಾಗಿ ಹೆಸರು ಪಡೆದವರು ಎಂದರು.

ರಾಜ್ಯವ್ಯಾಪ್ತಿ ದಿನದ 24 ತಾಸುಗಳು ಕೂಡ ರಾಜ್ಯದ ಜನರ ಹಿತದೃಷ್ಟಿಯಿಂದ 2023ಕ್ಕೆ ರಾಜ್ಯದಲ್ಲಿ ಸ್ವಂತಬಲದ ಮೇಲೆ ಜೆಡಿಎಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚಾರ ಮಾಡಿ,ತಮ್ಮ ಆರೋಗ್ಯವನ್ನು ಬದಿಗೊತ್ತಿ ರಾಜ್ಯದ ಜನರ ಕಲ್ಯಾಣಕ್ಕೆ ಶ್ರಮಪಡುತ್ತಿದ್ದಾರೆಂದು ತಿಳಿಸಿದರು.

ಕೆಲದಿನಗಳ ಹಿಂದೆ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಪಕ್ಷ ಸಂಘಟನೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬರುವುದು ಖಚಿತವಾಗಿದೆ ಎಂದು ಸರ್ವಜನರ ಕಲ್ಯಾಣಕ್ಕೆ ರೂಪಿಸಬಹುದಾದ ಯೋಜನೆಗಳ ಬಗ್ಗೆ ಆಸ್ಪತ್ರೆಯಿಂದಲೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಲಹೆ ಸೂಚನೆ ನೀಡುತ್ತಿದ್ದಾರೆ ಎಂದು ತಿಳಿಸಿದ ಅವರು ಕುಮಾರಸ್ವಾಮಿರವರಿಗೆ ತಮ್ಮ ಆರೋಗ್ಯಕ್ಕಿಂತ ರಾಜ್ಯದ ಜನರ ಕ್ಷೇಮ ಮುಖ್ಯವಾಗಿದೆ ಎಂದರು.

ಕುಮಾರಸ್ವಾಮಿರವರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಲ್ಲ ಈ ಕ್ಷೇತ್ರದ ಪ್ರತಿಯೊಬ್ಬ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೇ ಜೆಡಿಎಸ್ ಅಭ್ಯರ್ಥಿ ಎಂದು ನಿಮ್ಮ ಜವಾಬ್ದಾರಿಗೆ ವಹಿಸಿದ್ದಾರೆ, ಅವರ ನಂಬಿಕೆಯನ್ನು ಉಳಿಸಿಕೊಂಡು ಕಳೆದಭಾರಿಗಿಂತ ಈ ಭಾರಿ ಅವರನ್ನು ಹೆಚ್ಚಿನ ಮತಗಳನ್ನು ನೀಡಿ ಆಯ್ಕೆ ಮಾಡಿ ಎರಡನೇ ಬಾರಿಗೆ ಇದೇ ಕ್ಷೇತ್ರದಿಂದ ಮುಖ್ಯಮಂತ್ರಿ ಮಾಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭಲ್ಲಿ ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಹಿರಿಯ ಮುಖಂಡ ಗೋವಿಂದಹಳ್ಳಿ ನಾಗರಾಜು,ಮುಖಂಡರುಗಳಾದ ಪಾರ್ಥಸಾರಥಿ,ನರ್ಸರಿ ಲೋಕೇಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಹಾಗೂ ಹಲವಾರು ಮುಖಂಡರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು