Categories: ರಾಮನಗರ

ಸ್ವರ್ಗಕ್ಕೆ ಹೋಗಬೇಕು ಅಂದರೆ ನಿಮ್ಮ ಅಮೂಲ್ಯ ಮತ ಮಂಜುನಾಥ್‌ಗೆ ನೀಡಿ: ಮುನಿರತ್ನ

ರಾಮನಗರ: ನೀವು ಸ್ವರ್ಗಕ್ಕೆ ಹೋಗಬೇಕು ಅಂತ ಆಸೆ ಇದ್ದರೆ ಡಾ.ಮಂಜುನಾಥ್‌ಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ. ಒಂದು ತಪ್ಪು ಮತ ಹಾಕಿದರೂ ನಿಮಗೆ ಯಮ ಕಾಣಿಸುತ್ತಾನೆ. ನರಕದಲ್ಲಿ ಬಿಸಿ ಎಣ್ಣೆಗೆ ಅಜ್ಜುತ್ತಾನೆ ಎಂದು ಕನಕಪುರದಲ್ಲಿ ಶಾಸಕ ಮುನಿರತ್ನ ಹೇಳಿದ್ದಾರೆ.

ಕನಕಪುರದ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆಯಲ್ಲಿ ಮುನಿರತ್ನ ಮಾತನಾಡಿ, ರಾಜಕಾರಣಕ್ಕೆ ಬಂದರೆ ಜನಸೇವೆ ಮಾಡಬೇಕು. ಡಾ.ಮಂಜುನಾಥ್ ಬಂದಿರುವುದು ಸ್ವಾರ್ಥಕ್ಕೆ ಅಲ್ಲ, ಜನಸೇವೆಗೆ. ಬೇರೆಯವರಿಗೆ ಮತ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತದೆ. ಡಾ.ಮಂಜುನಾಥ್ ಅವರ ಸೇವೆ 140 ಕೋಟಿ ಜನತೆಗೆ ಬೇಕು. ಇದನ್ನು ಬರೆದಿಟ್ಟುಕೊಳ್ಳಿ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ಅಷ್ಟೇ ಸತ್ಯ. ಡಾ.ಮಂಜುನಾಥ್ ಅವರು ಮೋದಿ ಸಂಪುಟದಲ್ಲಿ ಸಚಿವರಾಗೋದು ಅಷ್ಟೇ ಸತ್ಯ ಎಂದು ಹೇಳಿದರು.

ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ ನೋಡಬಹುದು. ನರಕ್ಕೆ ಯಾಕೆ ಹೋಗುತ್ತೀರಿ, ನಾನೇ ಕಠಾರಿವೀರ ಅಂತ ಒಂದು ಸಿನಿಮಾ ಮಾಡಿದ್ದೇನೆ. ಅದರಲ್ಲಿ ಸ್ವರ್ಗ, ನರಕ ಹೇಗಿರುತ್ತದೆ ಅಂತ ನೋಡಿ. ಈ ಚುನಾವಣೆ ರಾಮ-ರಾವಣರ ಯುದ್ಧ. ನಿಮಗೆ ರಾಮಬೇಕಾ? ರಾವಣ ಬೇಕಾ? ನಾವು ಈ ರಾಮನನ್ನು ಪಾರ್ಲಿಮೆಂಟ್‌ಗೆ ಕಳುಹಿಸಬೇಕು. ಬಿಜೆಪಿ ಹೃದಯದಲ್ಲಿ ಜೆಡಿಎಸ್ ಇದೆ. ಮತ ಹಾಕುವಾಗ ಜೆಡಿಎಸ್ ಇಲ್ಲ ಎಂದು ಗೊಂದಲಕ್ಕೀಡಾಗಬೇಡಿ. ಮಂಜುನಾಥ್ ಹೃದಯದಲ್ಲಿ ಜೆಡಿಎಸ್ ಇದೆ. ಹಾಗಾಗಿ ಬಿಜೆಪಿ ಚಿಹ್ನೆಗೆ ಮತ ಹಾಕಿ ಎಂದರು.

Chaitra Kulal

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

4 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

21 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

49 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago