ರಾಮನಗರ: ವಕೀಲರ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡಿದ್ದಾರೆ. ಅವರಿಗೆ ಬೇರೆ ಕೆಲಸವಿಲ್ಲ. ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅವರು ಇಂದು ರಾಮನಗರದಲ್ಲಿ ಡಿ.ಕೆ. ಸಹೋದರರಿಂದ ಅಶಾಂತಿ ಸೃಷ್ಟಿ ಎಂದಿದ್ದ ಕುಮಾರಸ್ವಾಮಿ ಹೇಳಿಕೆಗೆ ಕನಕಪುರದಲ್ಲಿ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ವಕೀಲರ ಧರಣಿಗೆ ಕುಮಾರಸ್ವಾಮಿಯೇ ಕಾರಣ. ಅಶಾಂತಿ ಸೃಷ್ಠಿಸುತ್ತಿರುವುದೇ ಜೆಡಿಎಸ್ ಹಾಗೂ ಬಿಜೆಪಿ ಎಂದು ಹೆಚ್ ಡಿ ಕುಮಾರಸ್ವಾಮಿಯೇ ಕಾರಣ ಎಂದು ತಿರುಗೇಟು ನೀಡಿದ್ದಾರೆ.
ವಕೀಲರ ಹೋರಾಟಕ್ಕೆ ಸಂಬಂಧಿಸಿದಂತೆ, ಪಿಎಸ್ಐ ವಿರುದ್ಧ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆ. ಯಾರಿಗೂ ಅನ್ಯಾಯ ಆಗಬಾರದು ಅಂತ ಹೇಳಿದೆ ಎಂದು ಹೇಳಿದರು.