News Karnataka Kannada
Monday, April 29 2024
ರಾಮನಗರ

ಹೆಚ್​​.ಡಿ ದೇವೇಗೌಡರನ್ನು ಭೇಟಿ ಮಾಡಿದ ಸಚಿವ ಸಿಪಿ ಯೋಗೇಶ್ವರ್‌

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡರನ್ನು ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರು ತಡರಾತ್ರಿ ಧಿಡೀರ್ ಭೇಟಿ ಮಾಡಿದ್ದಾರೆ.
Photo Credit : News Kannada

ರಾಮನಗರ:  ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡರನ್ನು ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರು ತಡರಾತ್ರಿ ಧಿಡೀರ್ ಭೇಟಿ ಮಾಡಿದ್ದಾರೆ.

ದೇವೇಗೌಡರನ್ನು ಭೇಟಿ ಮಾಡಿದ ಬಗ್ಗೆ ತಮ್ಮ ಫೇಸ್​​ಬುಕ್ ಅಕೌಂಟ್​ನಲ್ಲಿ ಪೋಸ್ಟ್ ಶೇರ್ ಮಾಡಿರುವ ಯೋಗೇಶ್ವರ್ ಅವರು, ನಾಡಿನ ರೈತರು, ಕೃಷಿ ಕಾರ್ಮಿಕರ ಬಗ್ಗೆ ಈ ಇಳಿ ವಯಸ್ಸಿನಲ್ಲೂ ದೇವೇಗೌಡರಿಗೆ ಇರುವ ಕಳಕಳಿ ಅನುಕರಣೀಯ. 6 ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ಪೂರೈಸಿದ ದೇವೇಗೌಡರ ಜ್ಞಾನ, ಅನುಭವ ನಮ್ಮೆಲ್ಲರಿಗೂ ಪ್ರೇರಣೆ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ಕೊಟ್ಟಿದ್ದ ಸಿಪಿ ಯೋಗೇಶ್ವರ್‌ ಅವರು ಲೋಕಸಭಾ ಚುನಾವಣೆ ಕುರಿತು ಚರ್ಚೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಗ್ಗೆ ಮಾತನಾಡಿದ್ದು ದೇವೇಗೌಡರ ಜೊತೆ ರಾಜಕೀಯ ಸಂಬಂಧ ಸುಮಾರು 2 ಗಂಟೆಗಳ ಕಾಲ ಯೋಗೇಶ್ವರ್‌ ಅವರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ನಿನ್ನ ಬೆಂಬಲಕ್ಕೆ ನಾವಿದ್ದೇವೆ ಎಂದು ಯೋಗೇಶ್ವರ್​​ವರಿಗೆ ದೊಡ್ಡಗೌಡರು ಅಭಯ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು