ರಾಮನಗರ: ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆ ಮೇಲೆ ಇಂದು ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಿಡದಿಯ ಸಮೀಪವಿರುವ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇಂದು ಮೈತ್ರಿ ನಾಯಕರಿಂದ ಭೋಜನಾ ಕೂಟ ಆಯೋಜಿಸಲಾಗಿದ್ದು, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.