News Karnataka Kannada
Monday, May 06 2024
ರಾಮನಗರ

ರಾಮನಗರ: ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ

ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ತಡರಾತ್ರಿ ನಡೆದಿದೆ.
Photo Credit : NewsKarnataka

ರಾಮನಗರ: ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ತಡರಾತ್ರಿ ನಡೆದಿದೆ.

ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್‌ ಪೋಸ್ಟ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಾಲಕ ಮದ್ಯಪಾನ ಮಾಡಿ ಲಾರಿ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್‌ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು