News Karnataka Kannada
Saturday, April 20 2024
Cricket
ರಾಮನಗರ

ರಾಮನಗರ: ನಿಯಮ ಉಲ್ಲಂಘಿಸಿದ ಬಸ್ ಚಾಲಕನ ವಿರುದ್ಧ ಕ್ರಮ

Ramanagara: Action taken against bus driver for violating rules
Photo Credit : News Kannada

ರಾಮನಗರ: ಕೆಎಸ್‌ಆರ್‌ಟಿಸಿ ಬಸ್ಸೊಂದು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿ ಅತೀವೇಗ ಮತ್ತು ಅಜಾಗರೂಕತೆಯಿಂದ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಇತರೆ ವಾಹನ ಸವಾರರಿಗೆ ಭಯ ಹುಟ್ಟಿಸಿರುವ ಪ್ರಕರಣವೊಂದು ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬಿಡದಿ ಹೋಬಳಿ ಹನುಮಂತನಗರದ ಕೋತಿ ಆಂಜನೇಯಸ್ವಾಮಿ ದೇವಾಲಯದ ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಕೆಎ 10 ಎಫ್ 0492 ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್ ಅನ್ನು ಚಾಲಕ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿರುವುದನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಆಧಾರದಡಿ ಬಸ್ ಚಾಲಕನ ವಿರುದ್ಧ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಜುಲೈ 14ರಂದು ಬೆಳಿಗ್ಗೆ 10.41 ಗಂಟೆ ಸಮಯದಲ್ಲಿ ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇ ನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಿಡದಿಯ ಶೇಷಗಿರಿಹಳ್ಳಿ ಟೋಲ್ ಪ್ಲಾಜಾದಿಂದ ಹನುಮಂತನಗರ ಮಾರ್ಗವಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಮೈಸೂರು ಕಡೆಗೆ ಬಸ್ ಚಾಲನೆ ಮಾಡಿಕೊಂಡು ಹೋಗಿರುತ್ತಾರೆ. ಈ ವೇಳೆ ಬೆಂಗಳೂರು ಕಡೆಗೆ ಚಲಿಸುವ ವಾಹನಗಳಿಗೆ ಎದುರಾಗಿ ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ವಿಡಿಯೋದಿಂದ ದೃಢಪಟ್ಟಿದೆ.

ಎಕ್ಸ್‌ಪ್ರೆಸ್ ಹೈವೆಯಲ್ಲಿ ಇತರೆ ವಾಹನಗಳ ಚಾಲಕರಿಗೆ ಭಯ ಉಂಟುಮಾಡುವುದು ಹಾಗೂ ಪ್ರಯಾಣಿಕರ ಪ್ರಾಣಕ್ಕೆ ಹಾನಿಯಾಗುವ ರೀತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡಿಕೊಂಡು ಹೋಗುವುದು ಕಾನೂನು ಬಾಹೀರವಾಗಿದೆ. ಸದರಿ ಬಸ್ ಚಾಮರಾಜನಗರ ಡಿಪೋಗೆ ಸೇರಿದ್ದು ಬೆಂಗಳೂರಿನಿಂದ ಮಹದೇಶ್ವರಬೆಟ್ಟಕ್ಕೆ ತೆರಳಿರುವುದು ಕಂಡುಬಂದಿದೆ.

ಸದರಿ ವಿಚಾರವನ್ನು ಸಂಬಂಧಿಸಿದ ಡಿಪೋ ಮ್ಯಾನೇಜರ್‌ಗೆ ಮಾಹಿತಿ ನೀಡಲಾಗಿದ್ದು ಚಾಲಕನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಲಾಗಿದೆ. ಬಸ್ ಅನ್ನು ಶೀಘ್ರ ವಶಕ್ಕೆ ಪಡೆಯಲಾಗುವುದು ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು