Categories: ರಾಮನಗರ

ರಾಮನಗರ: ಬಿಜೆಪಿಯ ಅಶ್ವಥನಾರಾಯಣ ಗೌಡ ರಿಂದ ಸಿಎಂಗೆ ಪತ್ರ

ರಾಮನಗರ: ತಾಲೂಕು ಹಾಗೂ ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಮಾವು ಬೆಳೆಗೆ ಹಾನಿಯಾಗಿದ್ದು, ಮಾವು ಬೆಳೆಗಾರರಿಗೆ ಆಗಿರುವ ನಷ್ಟಕ್ಕೆ ಸ್ಪಂದಿಸಬೇಕು ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥನಾರಾಯಣ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಮತ್ತು ಆಲಿಕಲ್ಲಿನಿಂದ ಕೊಯ್ಲಿಗೆ ಬಂದ ಮಾವು ಬೆಳೆಗೆ ಹಾನಿಯಾಗಿದೆ. ಕೊಯ್ಲಿನ ಸಮಯದಲ್ಲಿ ಅಕಾಲಿಕ ಮಳೆಯಿಂದ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಆಲಿಕಲ್ಲಿನ ಹೊಡೆತಕ್ಕೆ ಮರದಲ್ಲಿದ್ದ ಮಾವು ಕೆಳಗೆ ಬಿದ್ದಿರುವುದು ಒಂದು ರೀತಿ ನಷ್ಟವಾದರೆ, ಮರದಲ್ಲೆ ಉಳಿದ ಮಾವಿಗೆ ಹುಳು ಬಿದ್ದು ಕೊಳೆತು ಹೋಗುತ್ತದೆ. ಎರಡು ಉಪಯೋಗಕ್ಕೆ ಬರುವುದಿಲ್ಲ, ತಕ್ಷಣವೇ ತೋಟಗಾರಿಕಾ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ, ಸರ್ವೆ ನಡೆಸಿ ನಷ್ಟವನ್ನು ನಿಖರವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಕೋಲಾರ, ಚಿಕ್ಕಬಳ್ಳಾಪುರದ ಬಹುತೇಕ ಭಾಗಗಳಲ್ಲಿ ಮಾವು ಬೆಳೆಗಾರರು ಕಂಗಾಲಾಗಿzರೆ. ಇದರ ಜೊತೆ ಅಕಾಲಿಕ ಮಳೆ ಮತ್ತು ಗುಡುಗು, ಸಿಡಿಲಿನಿಂದ ರೈತರ ಸಾವು, ದನಕರುಗಳ ಸಾವು ಸಂಭವಿಸಿದೆ. ಮನೆಗಳಿಗೆ ನೀರು ನುಗ್ಗಿ ರಾಮನಗರ ತಾಲ್ಲೂಕಿನ ಮಾಯಗಾನಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಕಳೆದ ವರ್ಷದಲ್ಲಿ ರಾಮನಗರದ ಅರ್ಕೇಶ್ವರ ಕಾಲೋನಿ ಸಂಪೂರ್ಣ ಮಳೆಯಿಂದ ಜಲಾವೃತವಾಗಿತ್ತು. ಈ ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲನೆ ಮಾಡಿ ಪರಿಹಾರ ಘೋಷಣೆ ಮಾಡಿ ಹಣ ಬಿಡುಗಡೆ ಮಾಡಿ ಸರ್ಕಾರ ರೈತರ ನೆರವಿಗೆ ಬರಬೇಕೆಂದು ಅಶ್ವಥ ನಾರಾಯಣ ಮನವಿ ಮಾಡಿದ್ದಾರೆ.

Sneha Gowda

Recent Posts

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

3 mins ago

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

28 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

1 hour ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

1 hour ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago