Categories: ರಾಮನಗರ

ರಾಮನಗರ: ರೇಷ್ಮೆ ಗೂಡಿಗೆ ಬಂಪರ್ ಧಾರಣೆ

ರಾಮನಗರ: ಅತಿವೃಷ್ಟಿ ಹಾಗೂ ಚಳಿಯಿಂದಾಗಿ ರೇಷ್ಮೆಗೂಡು ಉತ್ಪಾದನೆ ಕುಂಠಿತವಾಗಿರುವುದರಿಂದ ಗೂಡಿನ ಧಾರಣೆ ಏರಿಕೆಯಾಗುತ್ತಿದ್ದು,ರೇಷ್ಮೆ ಬೆಳೆದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಕೆ.ಜಿ.ಗೆ ಸುಮಾರು 865 ರೂ ದರ ದೊರೆಯುತ್ತಿದ್ದು, ಕಳೆದ ಎರಡು  ವರ್ಷದಿಂದ ರೇಷ್ಮೆಗೂಡಿಗೆ ಉತ್ತಮ ಬೆಲೆ ಸಿಗುತ್ತಿದೆ. ಹೀಗಾಗಿ ಸಾಕಷ್ಟು ರೈತರು ಮತ್ತೆ ರೇಷ್ಮೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ರಾಮನಗರ ಮಾರುಕಟ್ಟೆ ಒಂದರಲ್ಲಿಯೇ 86 ಸಾವಿರ ರೈತರು ನೋಂದಾಯಿಸಿಕೊಂಡಿದ್ದು, ರಾಜ್ಯ-ಹೊರ ರಾಜ್ಯಗಳಿಂದ ಗೂಡು ಬರುತ್ತಿದೆ.

ಇತ್ತೀಚೆಗೆ ಸುರಿದ ಮಳೆಯಿಂದಾಗಿ ರೇಷ್ಮೆ ಕೃಷಿಗೂ ಹೊಡೆತ ಬಿದ್ದಿದೆ.ಸಾಕಷ್ಟು ಕಡೆಗಳಲ್ಲಿ ಹಿಪ್ಪುನೇರಳೆ ತೋಟಗಳಿಗೆ ಹಾನಿಯಾಗಿದೆ. ಈಗ ಚಳಿಗಾಲವೂ ಆರಂಭ ಆಗಿದ್ದು, ಸೊಪ್ಪು ಹಾಗೂ ಗೂಡು ಉತ್ಪಾದನೆ ಸಹಜವಾಗಿಯೇ ಕುಸಿತ ಕಾಣುತ್ತಿದೆ. ಇನ್ನೂ ಕೆಲವು ತಿಂಗಳು ಕಾಲ ಇದೇ ಪರಿಸ್ಥಿತಿ  ಇರಲಿದ್ದು, ಗೂಡಿನ ಧಾರಣೆ ಇನ್ನಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎನ್ನುತ್ತಾರೆ ಮಾರುಕಟ್ಟೆಯ ಅಧಿಕಾರಿಗಳು.

ಕೆಲವು ವರ್ಷಗಳ ಹಿಂದಷ್ಟೇ ರಾಮನಗರ ಮಾರುಕಟ್ಟೆಗೆ ನಿತ್ಯ ಸರಾಸರಿ 60-70 ಟನ್ ನಷ್ಟು ಗೂಡು ಬರುತ್ತಿತ್ತು. ಆದರೆ ಸದ್ಯ ಈ ಪ್ರಮಾಣ 30ರಿಂದ35 ಟನ್  ಗಳಿಗೆ ಇಳಿಕೆ ಆಗಿದೆ. ಅದರಲ್ಲೂ ಸ್ಥಳೀಯವಾಗಿ ಬೆಳೆಯುವ ಮಿಶ್ರ ತಳಿಯ ಗೂಡಿನ ಪ್ರಮಾಣ ತೀವ್ರ ಕುಸಿದಿದೆ. ಹೀಗಾಗಿ ಇದರ ಬೆಲೆಯೂ ಏರಿಕೆ ಕಾಣತೊಡಗಿದೆ.

Ashika S

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

12 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

30 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 hours ago