Categories: ರಾಮನಗರ

ರಾಮನಗರ: ಪಡಿತರ ಅಕ್ಕಿ ವಿತರಣೆಯಲ್ಲಿ ವಂಚನೆ, ಪ್ರಕರಣ ದಾಖಲು

ರಾಮನಗರ: ಪಡಿತರ ವಿತರಣೆಯಲ್ಲಿ ಮೋಸ ಮಾಡುತ್ತಿರುವ ಬೂದಿಗುಪ್ಪೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿಗ್ರಹ ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ ಆಹಾರ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ನಗರದ ಹೊರವಲಯದ ಬೂದಿಗುಪ್ಪೆ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ಪಡಿತರ ಫಲಾನುಭವಿಗಳಿಗೆ ಮೋಸ ಮಾಡುತ್ತಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೆ ವಿತರಿಸಲು ಸರ್ಕಾರವು ೧೦ ಕೆಜಿ ಅಕ್ಕಿಯನ್ನು ನಿಗದಿಪಡಿಸಿದೆ. ಆದರೆ ಬೂದಿಗುಪ್ಪೆ ನ್ಯಾಯಬೆಲೆ ಅಂಗಡಿಯಲ್ಲಿ 10 ಕೆ.ಜಿ.ಯ ಬದಲು ತಲಾ 8 ಕೆ.ಜಿ. ವಿತರಣೆ ಮಾಡುತ್ತಿದ್ದು, ಪಡಿತರ ಚೀಟಿದಾರರಿಗೆ ಮೋಸ ಮಾಡಿ ಫಲಾನುಭವಿಗಳಿಂದ 10 ರೂ.ಗಳ ಲಂಚವನ್ನು ಅಕ್ರಮವಾಗಿ ಪಡೆದಿದ್ದಾರೆ.

ನ್ಯಾಯಬೆಲೆ ಅಂಗಡಿಯಲ್ಲಿ ಯಾವ ವಸ್ತುಗಳನ್ನು ವಿತರಿಸಲಾಗುತ್ತಿದೆ ಎಂಬ ಬಗ್ಗೆ ಯಾವುದೇ ಐಟಂ ಬೋರ್ಡ್ ಹಾಕದೆ ಪ್ರತಿ ತಿಂಗಳು ಜನರನ್ನು ವಂಚಿಸಲಾಗುತ್ತಿದೆ. ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ತನಿಖೆ ಮತ್ತು ಕಾನೂನು ಶಿಸ್ತು ಕ್ರಮ ಕೈಗೊಳ್ಳುವಂತೆ ಅವರು ತಮ್ಮ ದೂರಿನಲ್ಲಿ ಕೋರಿದ್ದಾರೆ.

Ashika S

Recent Posts

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

5 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

15 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

15 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

28 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

56 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

1 hour ago