News Karnataka Kannada
Sunday, May 12 2024
ರಾಮನಗರ

ರಾಮನಗರ: ಅಧಿಕಾರಕ್ಕಾಗಿ ಬರುವವರಿಗೆ ಮತ ನೀಡಬೇಡಿ

Don't vote for those who come for power
Photo Credit : By Author

ರಾಮನಗರ: ಜನರಿಂದ, ಜನರಿಗಾಗಿ ಹಾಗೂ ನಾಡಿನ ಅಭಿವೃದ್ಧಿಗಾಗಿ ಸದಾ ತುಡಿತ ಹೊಂದಿರುವ ಪಕ್ಷ ಕಾಂಗ್ರೆಸ್. ಹೀಗಾಗಿ ಜನರು ಅಭಿವೃದ್ಧಿಗಾಗಿ ಮತ ಹಾಕಬೇಕು ವಿನಃ ಅಧಿಕಾರಕ್ಕಾಗಿ ಬರುವವರಿಗಲ್ಲ ಎಂದು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬಿಡದಿ ಹೋಬಳಿ ಭೈರಮಂಗಲ ಗ್ರಾಪಂ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ಜನಾರ್ಶೀವಾದ ಯಾತ್ರೆ ನಡೆಸಿದ ವೇಳೆ ಭೈರಮಂಗಲ ಗ್ರಾಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜನರ ಬದುಕಿನಲ್ಲಿ ಬದಲಾವಣೆ ತಂದು ಪ್ರತಿಯೊಬ್ಬರೂ ಗೌರವಯುತ ಜೀವನ ನಡೆಸಬೇಕು ಹಾಗೂ ಹಸಿವಿನಿಂದ ಮಲಗುವುದನ್ನು ತಪ್ಪಿಸಬೇಕೆಂಬುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ. ಅನ್ನ ಕೊಡುವ ರೈತ, ಅಕ್ಷರ ಕಲಿಸುವ ಗುರು, ಶ್ರೇಯಸ್ಸು ಬಯಸುವ ತಾಯಿ ಇವರೆಲ್ಲರ ಹೃದಯವಂತಿಕೆಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಜನಸಾಮಾನ್ಯರ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿದ್ದರೇ ಸಮಾಜವೂ ಕೂಡ ಶಾಂತಿ ನೆಮ್ಮದಿಯಿಂದ ಇರಲು ಸಾಧ್ಯ ಎಂದರು.

ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರ ಬರುತ್ತದೆ ಹೋಗುತ್ತದೆ, ಆದರೆ ಜನರಿಗಾಗಿ ನಾವು ಮಾಡಿದ ಕೆಲಸಗಳು ಶಾಶ್ವತವಾಗಿರುತ್ತವೆ. ನನ್ನ ಅಧಿಕಾರವಧಿಯಲ್ಲಿ ಆಗಿರುವ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಗುಡ್ಡೆಗಳಿವೆ ಅದೆಲ್ಲವನ್ನೂ ಮುಂದಿನ ದಿನಗಳಲ್ಲಿ ಜನರ ಮುಂದೆ ಹೇಳುತ್ತೇನೆ. ರಾಜ್ಯದಲ್ಲಿ ಹಿಂದೆ ಬಂಗಾರಪ್ಪ, ಎಸ್.ಎಂ.ಕೃಷ್ಣ ಹಾಗೂ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ಕಾರ್ಯಕ್ರಮಗಳನ್ನು ನಾವು ಇಂದಿಗೂ ಸ್ಮರಿಸುತ್ತೇವೆ. ಹಾಗಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

“ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು” ಎಂಬ ಗಾದೆಯಂತೆ ಬಿಜೆಪಿ ಸರಕಾರ ಜನಸಾಮಾನ್ಯರಿಗೆ ಅಗತ್ಯವಾದುದನ್ನು ಬಿಟ್ಟು ಕಮೀಷನ್‌ಗಾಗಿ ಯೋಜನೆಗಳ ಹೆಸರಲ್ಲಿ ಲೂಟಿ ಹೊಡೆಯುತ್ತಿದೆ. ಗೃಹಬಳಕೆಯ ಅನಿಲ ಸಿಲಿಂಡರ್ ಬೆಲೆ 1200 ರೂಗೆ ಏರಿಕೆಯಾಗಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು ಜನರು ತತ್ತರಿಸಿದ್ದಾರೆ. ಇಂತಹ ಭ್ರಷ್ಟ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಬೇಕೆ? ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಜೆಡಿಎಸ್‌ನಲ್ಲಿ “ಅದೇ ರಾಗ ಅದೇ ಹಾಡು” ಕ್ಯಾಸೆಟ್ ರಿಪೀಟ್ ಆಗುತ್ತಿದೆ. ಆ ಪಕ್ಷ 123 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯುವುದು ಕನಸಿನ ಮಾತು. ಜನರು ಬದಲಾವಣೆ ಬಯಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನರಿಗೆ ಅನುಕೂಲಕ್ಕಾಗಿ ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದು ನಾವು ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಆಗಿರುವ ಯೋಜನೆಗಳ ಬಗ್ಗೆ ಹಾಗೂ ಮುಂದಿನ ಸರಕಾರದಲ್ಲಿ ಅನುಷ್ಠಾನಕ್ಕೆ ತರುವ ಗ್ಯಾರಂಟಿ ಕಾರ್ಡ್ ಯೋಜನೆಯ ಬಗ್ಗೆ ಜನರಿಗೆ ತಿಳಿಸುತ್ತಿದ್ದೇವೆ. ಪ್ರತಿ ಮನೆಯಿಂದ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಎಲ್ಲಾ ಮುನ್ಸೂಚನೆ ಇರುವುದರಿಂದ ಬೇರೆ ಪಕ್ಷಗಳಿಂದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಸೇರುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಆಕಾಂಕ್ಷೆಯಿಟ್ಟು ಬರುವ ಅನ್ಯ ಪಕ್ಷದ ಮುಖಂಡರನ್ನು ನಾವು ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದೇವೆ ಎಂದು ಬಾಲಕೃಷ್ಣ ತಿಳಿಸಿದರು.

ಇದೇ ಸಂದರ್ಭದಲ್ಲಿ ಭೈರಮಂಗಲದ ಹಿರಿಯ ಮುಖಂಡ ರವೀಶ್, ತಾಪಂ ಮಾಜಿ ಸದಸ್ಯೆ ಗೀತಾ ಸ್ವಾಮಿ, ಭೈರಮಂಗಲ ಗ್ರಾಪಂ ಸದಸ್ಯ ನಾಗರಾಜು ಅವರುಗಳು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು