News Karnataka Kannada
Sunday, May 05 2024
ರಾಮನಗರ

ರಾಮನಗರ: ಜಾನುವಾರು ವ್ಯಾಪಾರಿ ಹತ್ಯೆ ಕೇಸ್‌, ಪುನೀತ್ ಕೆರೆಹಳ್ಳಿ ಬಂಧನ

Ramanagara: Hindu activist Puneeth Kerehalli and five others arrested
Photo Credit : News Kannada

ರಾಮನಗರ: ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಪೊಲೀಸರು ರಾಜಸ್ತಾನದಲ್ಲಿ ಬಂಧಿಸಿದ್ದಾರೆ. ಕನಕಪುರದ ಸಾತನೂರು ಬಳಿ ಜಾನುವಾರು ರಕ್ಷಣೆ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನವಾಗಿದೆ.

ಜಾನುವಾರು ವ್ಯಾಪಾರಿ ಇದ್ರೀಷ್ ಪಾಷ ಎಂಬುವವರು ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಘಟನೆ ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ತಲೆಮರೆಸಿಕೊಂಡಿದ್ದರು. ಆರೋಪಿಗಳ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದರು. ಇದೀಗ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.

ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಗೋ ಸಂರಕ್ಷಣೆ ನೆಪದಲ್ಲಿ ತಮ್ಮ ಮೇಲೆ ದಾಳಿ ಮಾಡಲಾಗಿದೆ ಎಂದು ಕ್ಯಾಂಟರ್ ಚಾಲಕ ಪ್ರತಿದೂರು ನೀಡಿದ್ದರು. ಮರುದಿನ ಇದ್ದೀಷ್ ಪಾಷಾ ಎಂಬವರ ಶವ ಘಟನೆ ನಡೆದ ಸಮೀಪದಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮೃತಪಟ್ಟ ಇದ್ರೀಷ್ ಪಾಷಾ ಅವರ ಸಹೋದರ ಯೂನುಸ್ ಪಾಷಾ ಅವರು ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ನೀಡಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು