Categories: ರಾಮನಗರ

ರಾಮನಗರ: ಕುಟುಂಬ ರಾಜಕಾರಣದ ವಿರುದ್ಧ ಸುಮಲತಾ ಆಕ್ರೋಶ

ರಾಮನಗರ: ಕ್ಷೇತ್ರದ ಜನರು ಬೇರೆ ಪಕ್ಷಗಳಿಗೆ ಅಧಿಕಾರ ಕೊಟ್ಟು ಅವರ ಸ್ವಾರ್ಥ ಮತ್ತು ಕುಟುಂಬ ರಾಜಕಾರಣದಿಂದ ಬೇಸತ್ತಿದ್ದು, ಈ ಬಾರಿ ಅದನ್ನು ಬದಲಾಯಿಸಲು ಮನಸ್ಸು ಮಾಡಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳುವುದರೊಂದಿಗೆ ಕುಟುಂಬ ರಾಜಕಾರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೌತಮ್‌ಗೌಡ ಅವರ ಪರ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಹಾಗೂ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯಿಂದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪಾಸಿಟಿವ್ ವಾತಾವರಣ ನಿರ್ಮಾಣವಾಗಿದೆ. ಜನರು ಮೋದಿ ನಾಯಕತ್ವ ಮೆಚ್ಚಿಕೊಂಡಿದ್ದು, ಈ ಭಾಗದಲ್ಲಿ ಬದಲಾವಣೆಯ ಅಲೆ ಎದ್ದಿದೆ. ಸ್ವಾರ್ಥ ಮತ್ತು ಕುಟುಂಬ ರಾಜಕಾರಣವನ್ನು ಬದಲಾಯಿಸಲು ಇಲ್ಲಿನ ಜನರು ಮನಸ್ಸು ಮಾಡಿದ್ದಾರೆ. ರಾಮನಗರದಲ್ಲಿಯೂ ಈ ಬಾರಿ ಎಲ್ಲರಿಗೂ ಆಶ್ಚರ್ಯವಾಗುವ ಫಲಿತಾಂಶ ಬರಲಿದೆ ಎಂದು ಹೇಳಿದರು.

ಬಿಜೆಪಿ ಯುವಸಮುದಾಯಕ್ಕೆ ಹಾಗೂ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿದೆ. ಯುವಕರಿಗೆ ಅವಕಾಶ ಕೊಡುತ್ತಿರುವ ಪಕ್ಷ ಅಂದರೆ ಬಿಜೆಪಿ ಮಾತ್ರ. ಇಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ. ಸಮರ್ಥರು ಹಾಗೂ ಜನರ ಕಾಳಜಿ ಇರುವ ಅಭ್ಯರ್ಥಿಗಳಿಗೆ ಮಣೆ ಹಾಕಿದ್ದಾರೆ. ಹೀಗಾಗಿ ಎಲ್ಲಾ ಕಡೆ ಬದಲಾವಣೆಯ ಗಾಳಿ ಬೀಸುತ್ತಿದೆ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ನನ್ನ ವಿರುದ್ಧ ಕುತಂತ್ರ ಮಾಡಿದವರೇ ಕುತಂತ್ರದ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಕುತಂತ್ರ ಮಾಡುವವರೇ ಕುತಂತ್ರದ ಬಗ್ಗೆ ಮಾತನಾಡುತ್ತಿರುವುದು ನನಗೆ ಆಶ್ಚರ್ಯವಾಗುತ್ತಿದೆ. ಮಂಡ್ಯ ಸಂಸತ್ ಚುನಾವಣೆಯಲ್ಲಿ ಏನೆಲ್ಲ ಕುತಂತ್ರ ನಡೆಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿರವರ ಬಿಜೆಪಿ- ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣದ ಆರೋಪಕ್ಕೆ ಸಂಸದೆ ಸುಮಲತಾ ಅಂಬರೀಷ್ ತಿರುಗೇಟು ನೀಡಿದರು.

ಮಂಡ್ಯದಲ್ಲಿ ನನ್ನ ವಿರುದ್ಧ ನಾಲ್ಕು ಮಂದಿ ಸುಮಲತಾ ಎಂಬು ಹೆಸರಿನವರನ್ನು ಕಣಕ್ಕಿಳಿಸಿದ್ದರು. ಎಲ್ಲ ರೀತಿಯ ಕುತಂತ್ರ ಮಾಡಿ ಬೇರೆಯವರ ಮೇಲೆ ಆರೋಪ ಮಾಡುವುದು ಎಷ್ಟು ಸರಿ. ಮಂಡ್ಯದ ರೀತಿ ಇಲ್ಲಿಯೂ ಕುತಂತ್ರ ರಾಜಕಾರಣ ನಡೆಯುತ್ತಿದೆ ಎಂದು ಆರೋಪ ಮಾಡುವುದು ನಿಜಕ್ಕೂ ಹಾಸ್ಯಾಸ್ಪದ ಎಂದರು. ವಿಜಯಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಈ ರೀತಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಬಹಿರಂಗವಾಗಿ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಹೊಂದಾಣಿಕೆ ರಾಜಕಾರಣ ಎಲ್ಲಿ ನಡೆಯುತ್ತಿದೆ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದರು.

ರಾಮನಗರ ಕ್ಷೇತ್ರದಲ್ಲಿಯೂ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಇಲ್ಲಿ ಕಾಂಗ್ರೆಸ್ ನವರು ಬಲಿಷ್ಠ ಅಭ್ಯರ್ಥಿಯನ್ನು ಏಕೆ ಕಣಕ್ಕಿಳಿಸಲಿಲ್ಲ. ಜೆಡಿಎಸ್ ಅನ್ನು ಗೆಲ್ಲಿಸುವ ಉದ್ದೇಶದಿಂದಲೇ ಕಾಂಗ್ರೆಸ್ ನವರು ಪ್ರಬಲ ಅಭ್ಯರ್ಥಿಯನ್ನು ಇಳಿಸಿಲ್ಲ. ಅದೇ ರೀತಿ ಜೆಡಿಎಸ್ ನವರು ಕನಕನಪುರ ಕ್ಷೇತ್ರದಲ್ಲಿ ಬಲಿಷ್ಠ ಅಭ್ಯರ್ಥಿಯನ್ನು ಹಾಕುವುದಿಲ್ಲ. ಕಳೆದ ಚುನಾವಣೆಯಲ್ಲಿ ಏನಾಯಿತು. ಚುನಾವಣೆ ಮುಗಿದ ಮೇಲೆ ಇಬ್ಬರೂ ಸೇರಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದರು. ಈಗಲೂ ಅದು ನಡೆಯುವುದಿಲ್ಲ ಅಂತಾ ನೀವು ನಂಬುತ್ತೀರಾ ಎಂದು ಪ್ರಶ್ನಿಸಿದರು.

ಸುಮಲತಾ ವಿರುದ್ಧ ಕುಮಾರಸ್ವಾಮಿ ಮಾತನಾಡದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಇದೇ ಸಂಸ್ಕಾರ ನನ್ನ ಚುನಾವಣೆಯಲ್ಲೂ ತೋರಿಸಬೇಕಿತ್ತು. ಈಗ ಮೋಸದ ಮಾತಿಗೆ ಯಾರೂ ಮರುಳಾಗುವುದಿಲ್ಲವೆಂದು ಎಲ್ಲರಿಗೂ ಗೊತ್ತಾಗಿದೆ.

ಮೊದಲ ಪಾರ್ಲಿಮೆಂಟ್ ನಲ್ಲಿ ಬಿಜೆಪಿ 4 ಸ್ಥಾನದಲ್ಲಿತ್ತು. ಇವತ್ತು 304 ಸ್ಥಾನಕ್ಕೆ ಹೆಚ್ಚಳವಾಗಿದೆ. ಯಾವುದನ್ನೂ ಅಸಾಧ್ಯ ಎಂದು ಹೇಳಲು ಆಗದು. ಸವಾಲನ್ನು ಎದುರಿಸಿ ಮುನ್ನಡೆಯಬೇಕು ಎಂದು ಸುಮಲತಾ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಅಭ್ಯರ್ಥಿ ಗೌತಮ್‌ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರದೇವರು, ಮುಖಂಡರಾದ ಸುರೇಶ್, ಎಸ್.ಆರ್.ನಾಗರಾಜು, ಡಾ.ಪುಣ್ಯಾವತಿ, ಜಿ.ವಿ.ಪದ್ಮನಾಭ, ವಿ.ರಾಜು, ಚಂದ್ರಶೇಖರ್ ರೆಡ್ಡಿ ಮುಂತಾದವರು ಇದ್ದರು.

Gayathri SG

Recent Posts

ಅಶ್ಲೀಲ ವಿಡಿಯೋ ಪ್ರಕರಣ : ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಸಂತ್ರಸ್ಥೆ ದೂರು

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದ್ದು ಇವರ ಜೊತೆ ಅವರ ತಂದೆ…

37 mins ago

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

1 hour ago

ಮೇ 29ಕ್ಕೆ ವಿಜಯಪುರಕ್ಕೆ ಮಾಜಿ ಉಪ ಮುಖ್ಯ ಮಂತ್ರಿ ಲಕ್ಷ್ಮಣ್ ಸವದಿ ಆಗಮನ

ಮುಂಬರುವ 7 ಮೇ 2024 ರಂದು ಜರುಗುವ ಸಾರ್ವತ್ರಿಕ ವಿಜಯಪುರ (ಮೀಸಲು) ಲೋಕಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸ್ಟಾರ್ ಪ್ರಚಾರಕರು…

2 hours ago

ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು…

2 hours ago

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮತಯಾಚನೆ ನಡೆಸಿದ ಖೂಬಾ, ಖಾಶೆಂಪುರ್, ಬೆಲ್ದಾಳೆ

ಬೀದರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ…

2 hours ago

ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ…

2 hours ago