ರಾಮನಗರ

ರಾಮನಗರ: ಕಾವ್ಯ ಪರಂಪರೆ ಏರಿಳಿತ ಕಂಡಿದೆ- ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ

ರಾಮನಗರ: ಆಧುನಿಕ ಕನ್ನಡ ಕಾವ್ಯಗಳು ಜನಿಸಿ ಶತಮಾನಗಳೇ ಸಂದಿದ್ದರೂ ಕಾವ್ಯ ಪರಂಪರೆ ಅನೇಕ ಏರಿಳಿತಗಳನ್ನು ಕಂಡಿದೆ. ಹೀಗಾಗಿ ಕಾವ್ಯದ ಮರು ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೈಲಾಂಚ ಹೋಬಳಿ ಕೃಷ್ಣಾಪುರದೊಡ್ಡಿಯಲ್ಲಿರುವ ತಾನಿನಾ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆದ ಶಿವರಾತ್ರಿ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿ, ಕಾವ್ಯ ರಚನಾಕಾರನಿಗೆ ಸಾಮಾಜಿಕ ಸಮಸ್ಯೆ, ತೊಳಲಾಟ, ಬದುಕಿನ ವಿವಿಧ ಆಯಾಮಗಳ ಬಗ್ಗೆ ಅರಿವಿನ ಜೊತೆಗೆ ನಿರಂತರ ಅಧ್ಯಯನದ ಅಭಿರುಚಿ ಇರಬೇಕು. ಅಲ್ಲದೆ ಕಾವ್ಯವನ್ನು ಯಾರಿಗಾಗಿ ಬರೆಯಬೇಕು, ಏತಕ್ಕೆ ಬರೆಯಬೇಕು ಎನ್ನುವ ಪ್ರಶ್ನೆಯನ್ನು ಹಾಕಿಕೊಂಡಾಗ ಮಾತ್ರ ಉತ್ತಮ ಕಾವ್ಯಗಳು ಹೊರಬರಲು ಸಾಧ್ಯ ಎಂದು ಪ್ರತಿಪಾದಿಸಿದರು.

ಜಾತಿ ವ್ಯವಸ್ಥೆ, ಸಾಮಾಜಿಕ ಅನಿಷ್ಠ ಪದ್ದತಿಗಳು ಸೇರಿದಂತೆ ಸಮಾಜದಲ್ಲಿರುವ ಅನಿಷ್ಠಗಳನ್ನು ತೆಗೆದುಹಾಕಲು ಸಾಕಷ್ಟು ವರ್ಷಗಳ ಹಿಂದೆಯೇ ಗೌತಮ ಬುದ್ಧ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರು ಶ್ರಮಿಸಿದ್ದರು. ಆದರೆ ಇಂದು ತೋರಿಕೆಗೆ ಹಾಗೂ ಪ್ರಚಾರಕ್ಕಾಗಿ ಮಾತ್ರ ಸಮಾಜದ ಕಣ್ಣೊರೆಸುವ ಮನಸ್ಥಿತಿಯ ಜನರಿದ್ದಾರೆ. ಉತ್ತಮ ಕಾವ್ಯಗಳ ಮೂಲಕ ಸಮಾಜವನ್ನು ತಿದ್ದುವ ಕೆಲವಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಮಾತನಾಡಿ, ಕವಿಗಳು ವಸ್ತುನಿಷ್ಠವಾಗಿ ಕವನಗಳನ್ನು ರಚಿಸಿದಾಗ, ನಿರಂತರ ಸಾಹಿತ್ಯವನ್ನು ಅಭ್ಯಸಿಸಿದಾಗ ಮಾತ್ರ ಗುಣಮಟ್ಟದ ಕಾವ್ಯ ಸಾಹಿತ್ಯಗಳು ಹೊರಬರಲು ಸಾಧ್ಯ. ಕನ್ನಡದ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಸಾಹಿತಿಗಳು ಮುಂದಾಗಬೇಕು ಎಂದು ತಿಳಿಸಿದರು.

ಕವಿಗೋಷ್ಠಿಯಲ್ಲಿ ತಾ.ಸಿ.ತಿಮ್ಮಯ್ಯ, ಡಾ.ದೇವರಾಜು, ಡಾ.ಸುನೀಲ್‌ಕುಮಾರ್, ಪೂರ್ಣಿಮಾ ಹುಲುವಾಡಿ, ವಿಜಯಕುಮಾರ್, ಹೆಚ್.ಎಸ್.ಹೆಬ್ಬಳಲು, ವೆಂಕಟಗಿರಿಯಪ್ಪ, ರಾವುಗೊಡ್ಲು, ಎಸ್.ಎಲ್.ಲಕ್ಕಪ್ಪ, ಪೂರ್ಣಚಂದ್ರ, ಸಾ.ಮ.ಶಿವಮಲ್ಲಯ್ಯ, ಕವಿತಾರಾವ್ ಅವರುಗಳು ಕವಿತೆಗಳನ್ನು ವಾಚಿಸಿದರು.

ಸಾಂಸ್ಕೃತಿಕ ಉತ್ಸವದಲ್ಲಿ ಬೆಂಗಳೂರಿನ ಕಾವ್ಯರಾವ್ ಮತ್ತು ತಂಡದವರು ದೇವರನಾಮ, ಕನಕಪುರದ ಕೆ.ಶಿವರಾಮು ಮತ್ತು ತಂಡದವರು ಜಾನಪದ ಗೀತೆ, ಲಿಂಗರಾಜು ಮತ್ತು ತಂಡ ನೀಲಗಾರರ ಪದಗಳನ್ನು ಹಾಡಿ ರಂಜಿಸಿದರು. ಶಾಂತಲಾ ಚಾರಿಟಬಲ್ ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ಕವಿತಾರಾವ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago