News Karnataka Kannada
Friday, May 10 2024
ರಾಮನಗರ

ಶಾಲಾ ಗೋಡೆ ಕುಸಿದು ವಿದ್ಯಾರ್ಥಿ ದಾರುಣ ಸಾವು

ಮೀನುಗಾರರೊಬ್ಬರು ಸಾಲ ಪಾವತಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.
Photo Credit : News Kannada

ರಾಮನಗರ: ರಾಮನಗರ ಜಿಲ್ಲೆಯ ಸರ್ಕಾರಿ ಸ್ವಾಮ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗೋಡೆ ಕುಸಿದು 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ತೀವ್ರ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಬಿಡದಿ ಸಮೀಪದ ಎಚ್.ಗೊಲ್ಲಹಳ್ಳಿ ಗ್ರಾಮದ ವಸತಿ ಶಾಲೆಯ ಆವರಣದಲ್ಲಿ ಗುರುವಾರ ಬೆಳಗ್ಗೆ ಈ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಆರನೇ ತರಗತಿಯ ವಿದ್ಯಾರ್ಥಿ ಕೌಶಿಕ್ ಗೌಡ ಎಂದು ಗುರುತಿಸಲಾಗಿದೆ. ಬೆಳಗ್ಗೆ ಮುಖ ತೊಳೆಯುತ್ತಿದ್ದ ವೇಳೆ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಬಾಲಕನ ತಲೆಗೆ ತೀವ್ರ ಗಾಯವಾಗಿತ್ತು. ಆತನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾನೆ. ಉಳಿದಂತೆ ಇಬ್ಬರು ಮಕ್ಕಳು ತೀವ್ರ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಕ್ಕಳ ಸುರಕ್ಷತೆ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತ ಬಾಲಕನ ಪೋಷಕರು ಹಾಗೂ ಕುಟುಂಬದವರು ಖಂಡಿಸಿದ್ದಾರೆ. ಈ ಬಗ್ಗೆ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು