Categories: ರಾಮನಗರ

ಶಾಕಿಂಗ್‌ ನ್ಯೂಸ್‌: ಕಾಡಾನೆ ಹತ್ಯೆ ಮಾಡಿ ರಹಸ್ಯವಾಗಿ ಹೂತು ಹಾಕಿದ ರೈತ

ರಾಮನಗರ: ಹಾಸನದಲ್ಲಿ ಮದವೇರಿದ್ದ ಕಾಡಾನೆ ತುಳಿದು ದಸರಾ ಆನೆ ಅರ್ಜುನ ಮೃತಪಟ್ಟ ಘಟನೆ ವರದಿಯಾಗಿತ್ತು. ಇದೀಗ ರಾಮನಗರದಲ್ಲಿ ರೈತರೊಬ್ಬರು ಅಕ್ರಮವಾಗಿ ತೋಟಕ್ಕೆ ವಿದ್ಯುತ್ ತಂತಿ ಹಾಕಿದ್ದ ತಂತಿ ಸ್ಪರ್ಶಿಸಿ ಮೃತಪಟ್ಟ ಆನೆಯನ್ನು ರಹಸ್ಯವಾಗಿ ಹೂತು ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿ ಘಟನೆ ನಡೆದಿದ್ದು, ಇದೀಗ ಮೂರು ದಿನಗಳ ಬಳಿಕ ಆನೆಯ ಕಳೇಬರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹೊರ ತೆಗೆದಿದ್ದಾರೆ. ಆದರೆ, ಅಷ್ಟರಲ್ಲಿ ಆರೋಪಿ ರೈತ ನಾಪತ್ತೆಯಾಗಿದ್ದಾರೆ.

ರೈತ ನಂಜೇಗೌಡ ಎಂಬವರು ಕಾಡಾನೆ ಹಾವಳಿಯಿಂದ ತೋಟವನ್ನು ರಕ್ಷಿಸಲು ಅಕ್ರಮವಾಗಿ ತೋಟದ ಸುತ್ತ ವಿದ್ಯುತ್ ತಂತಿ ಹಾಕಿದ್ದರು. ಇದನ್ನು ಸ್ಪರ್ಶಿಸಿ 16 ವರ್ಷದ ಗಂಡಾನೆ ಮೃತಪಟ್ಟಿತ್ತು. ಅದನ್ನು ಯಾರಿಗೂ ಗೊತ್ತಾಗದಂತೆ ನಂಜೇಗೌಡ ಹೂತುಹಾಕಿದ್ದರು. ಈ ಕುರಿತು ಸುಳಿವು ದೊರೆತ ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಸಹಿತ ಸ್ಥಳಕ್ಕೆ ತೆರಳಿ ಕಾಡಾನೆ ಕಳೇಬರ ಹೊರ ತೆಗೆದಿದ್ದಾರೆ. ರೈತ ನಂಜೇಗೌಡ ದಂತಕ್ಕಾಗಿ ಆನೆಯನ್ನು ಸಾಯಿಸಿಲ್ಲ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago