Categories: ರಾಮನಗರ

ಜೆಡಿಎಸ್ ನ ವಂಶ ಪಾರಂಪರ್ಯ ರಾಜಕಾರಣ ವಿರುದ್ಧ ಸುಮಲತಾ ವಾಗ್ದಾಳಿ

ರಾಮನಗರ: ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್‌ನಲ್ಲಿ ತಂದೆ ಶಾಸಕ, ಮಗ ಶಾಸಕ, ಪ್ರಸ್ತುತ ಮೊಮ್ಮಗ ಶಾಸಕನಾಗಲು ಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರ ವೇಳೆ ಅವರು ಮಾತನಾಡಿದರು. ಅಂಬರೀಶ್ ಅವರ ರಾಜಕೀಯ ಜೀವನ ಆರಂಭವಾದದ್ದು ರಾಮನಗರದಿಂದ ಎಂದು ಸುಮಲತಾ ಹೇಳಿದರು. ರಾಮನಗರದ ಮತದಾರರೊಂದಿಗೆ ನಮ್ಮ ಕುಟುಂಬ ಉತ್ತಮ ಬಾಂಧವ್ಯ ಹೊಂದಿದೆ. ಬಿಜೆಪಿ ಮಹಿಳೆಯರನ್ನು ಗೌರವಿಸುತ್ತದೆ. ಮಂಡ್ಯದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದವರೇ ಇಲ್ಲಿ ಸ್ಪರ್ಧಿಸಿದ್ದಾರೆ. ನಾನು ಅವರ ಕುಟುಂಬದ ವಿರುದ್ಧ ಸ್ಪರ್ಧಿಸಿದ್ದು ಅವರ ದೃಷ್ಟಿಯಲ್ಲಿ ದೊಡ್ಡ ತಪ್ಪಾಗಿದೆ. ಮಹಿಳೆ ಎಂಬ ಗೌರವವಿಲ್ಲದೆ ಜೆಡಿಎಸ್ ಮಾತನಾಡುತ್ತಿದೆ ಎಂದು ಟೀಕಿಸಿದರು.

ಆದರೆ ಮಂಡ್ಯದ ಜನ ನನ್ನ ಬೆಂಬಲಕ್ಕೆ ನಿಂತರು. ಭದ್ರಕೋಟೆ, ಜಾತಿಯ ನಡುವೆಯೂ ಮಂಡ್ಯದ ಜನತೆ ಸ್ವಾಭಿಮಾನ ಕಳೆದುಕೊಳ್ಳಲಿಲ್ಲ. ನನ್ನನ್ನು ಆಯ್ಕೆ ಮಾಡುವ ಮೂಲಕ ವಂಶಪಾರಂಪರ್ಯ ಆಡಳಿತದ ಸೊಕ್ಕು ಮುರಿದರು ಎಂದರು.

Umesha HS

Recent Posts

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

4 mins ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

34 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

49 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

1 hour ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

1 hour ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

2 hours ago