News Karnataka Kannada
Thursday, May 02 2024
ರಾಮನಗರ

ಲಾರಿ ಟಿಟಿ ನಡುವೆ ಭೀಕರ ಅಪಘಾತ: ಮೂವರು ಸಾವು

ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ದಿಂದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಡರಾತ್ರಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.
Photo Credit : News Kannada

ರಾಮನಗರ:  ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತದಿಂದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಡರಾತ್ರಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಟಿಟಿ ವಾಹನ ಹೋಗುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಟಿಟಿ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ.

ಟಿಟಿ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು