News Karnataka Kannada
Friday, May 03 2024
ರಾಮನಗರ

ಯಲವನತ್ತ ಕಾಡಂಚಿನಲ್ಲಿ ಎರಡು ಕಾಡಾನೆಗಳು ಸಾವು

ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಬಿಸಿಲಿನ ಬೇಗೆ ತಾಳಲಾರದೆ  ಮೃತಪಟ್ಟಿವೆ ಎಂದು ಶಂಕಿಸಲಾಗಿದೆ.
Photo Credit : NewsKarnataka

ರಾಮನಗರ: ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಬಿಸಿಲಿನ ಬೇಗೆ ತಾಳಲಾರದೆ  ಮೃತಪಟ್ಟಿವೆ ಎಂದು ಶಂಕಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆ 14 ವರ್ಷದ ಒಂಟಿ ಸಲಗ ನಿತ್ರಾಣಗೊಂಡಿತ್ತು. ನಿತ್ರಾಣಗೊಂಡಿದ್ದ ಕಾಡಾನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಿದ್ದರು. ಇದೀಗ ನಿತ್ರಾಣಗೊಂಡಿದ್ದ ಕಾಡಾನೆ ಸೇರಿ ಮತ್ತೊಂದು 35 ವರ್ಷದ ಕಾಡಾನೆಯೂ ಮೃತಪಟ್ಟಿದೆ. ಕಾಡಿನಲ್ಲಿ ಕುಡಿಯಲು ನೀರು ಸಿಗದೆ ಪರದಾಡಿ ನಿತ್ರಾಣಗೊಂಡು ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಡಿಎಫ್‌ಓ ರಾಮಕೃಷ್ಣಪ್ಪ, ಕನಕಪುರ ಎಸಿಎಫ್ ಗಣೇಶ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕಾಡಾನೆ ಸಾವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು