Categories: ರಾಮನಗರ

ನಾಲ್ಕುಗೋಡೆಗಳ ಮಧ್ಯೆ ಸ್ಟಾಟರ್ಜಿ ಚರ್ಚೆ ಮಾಡಿದ್ದೇವೆ ಎಂದ ವಿಜಯೇಂದ್ರ

ರಾಮನಗರ: ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಗೆ ಅಂತಿಮ ಮುದ್ರೆ ಬಿದ್ದು ತಿಂಗಳು ಕಳೆದಿದೆ. ಜೆಡಿಎಸ್‌ ಮುಖ್ಯಸ್ಥ ಕುಮಾರಸ್ವಾಮಿ ಕೈ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇತ್ತ ರಾಜ್ಯಾಧ್ಯಕ್ಷರಿಲ್ಲದೆ ಮುರುಕು ಮನೆಯಂತಾಗಿದ್ದ ಬಿಜೆಪಿಗೆ ಹೊಸ ಅಧ್ಯಕ್ಷರು, ಪ್ರತಿಪಕ್ಷ ನಾಯಕರು ದೊರೆತಿದ್ದಾರೆ. ಇದೀಗ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ತಮ್ಮ ಮಿತ್ರಪಕ್ಷವಾದ ಜೆಡಿಎಸ್‌ ಮುಖ್ಯಸ್ಥ ಎಚ್‌ಡಿಕೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಕುಮಾರಸ್ವಾಮಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ಮೋದಿ, ಜೆಪಿ ನಡ್ಡಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಯವರು ದೆಹಲಿಯಲ್ಲಿ ಸಭೆ ಮಾಡಿದ ಬಳಿಕ ನಾನು ಇಂದು ಭೇಟಿಯಾಗಿದ್ದೇನೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮೈತ್ರಿ ಬಗ್ಗೆ ಮಾತನಾಡಿದ್ದೇವೆ. ಏನ್ ಸ್ಟಾಟರ್ಜಿ ಇದೆ ಅಂತ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿಯ ವಿಜಯ ಪತಾಕೆ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಿದ್ದೇನೆ. ದೇಶದ ಭವಿಷ್ಯ ರೂಪಿಸುವ ಲೋಕಸಭೆ ಚುನಾವಣೆ. ಹೀಗಾಗಿ 28 ಕ್ಷೇತ್ರಕ್ಕೆ 28 ಕ್ಷೇತ್ರಗಳಲ್ಲಿ ಬಿಜೆಪಿ , ಜೆಡಿಎಸ್ ಗೆಲ್ಲುವುದಕ್ಕೆ ಹೊರಟಿದೆ ಎಂದು ತಿಳಿಸಿದ್ದಾರೆ.

Ashika S

Recent Posts

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

10 seconds ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

28 seconds ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

25 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

27 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

47 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

58 mins ago