ರಾಮನಗರ

ಪ್ರಧಾನಿ ಹುದ್ದೆ ಕೊಟ್ಟರೂ ಬಿಜೆಪಿ ಸೇರಲ್ಲ: ಸಿದ್ದರಾಮಯ್ಯ

ರಾಮನಗರ: ಪ್ರಧಾನಿ ಅಥವಾ ರಾಷ್ಟ್ರಪತಿ ಸ್ಥಾನ ನೀಡಿದರೂ ಬಿಜೆಪಿಗೆ ಸೇರುವುದಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಮಾಗಡಿಯಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರಕ್ಕಾಗಿ ಜೆಡಿಎಸ್ ಮತ್ತು ಇತರ ಪಕ್ಷಗಳು ಬಿಜೆಪಿಯೊಂದಿಗೆ ಕೈಜೋಡಿಸಲಿವೆ. ಜೆಡಿಎಸ್‌ಗೆ ಯಾವುದೇ ಸಿದ್ಧಾಂತ ಮತ್ತು ಅರ್ಹತೆ ಇಲ್ಲ ಮತ್ತು ಅಧಿಕಾರ ಪಡೆಯಲು ಯಾರೊಂದಿಗಾದರೂ ಕೈಜೋಡಿಸಬಹುದು.

“ನನ್ನನ್ನು ಬಿಜೆಪಿಯವರು ಹಿಂದೂ ವಿರೋಧಿ ಎಂದು ಟ್ಯಾಗ್ ಮಾಡಿದ್ದಾರೆ. ಸಿ.ಟಿ.ರವಿ (ಬಿಜೆಪಿ ಶಾಸಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ) ನನ್ನನ್ನು ಸಿದ್ದರಾಮುಲ್ಲಾ ಖಾನ್ ಎಂದು ಕರೆಯುತ್ತಾರೆ. ಮಹಾತ್ಮ ಗಾಂಧಿ ನಿಜವಾದ ಹಿಂದೂ ಆಗಿದ್ದರು. ಆದರೆ, ಗೋಡ್ಸೆಯನ್ನು ಪೂಜಿಸುವವರನ್ನು ನಿಜವಾದ ಹಿಂದೂಗಳು ಎಂದು ಕರೆಯಬಹುದೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅವರಿಗೆ ಗೌರವವಿದೆಯೇ? ಅಂತಹ ಜನರೊಂದಿಗೆ ಮೈತ್ರಿ ಮಾಡಿಕೊಂಡ ಪಕ್ಷಗಳಿಗೆ ಏನಾದರೂ ಗೌರವವಿದೆಯೇ? ಎಂದು ಕೇಳಿದರು.

”ನಾನು ಸಿಎಂ ಆಗಿದ್ದ ಅವಧಿಯಲ್ಲಿ ಎಲ್ಲರಿಗೂ ಆಹಾರ ಭದ್ರತೆ ನೀಡಿದ್ದೇನೆ, ಬಿಜೆಪಿಯಿಂದ ಸಾಧ್ಯವಾಗಿಲ್ಲ, ಈ ಹಿಂದೆ ಏಳು ಕೆಜಿ ಅಕ್ಕಿ ನೀಡಲಾಗಿತ್ತು, ಅದನ್ನು ಬಿಜೆಪಿ ಸರಕಾರ ಐದು ಕೆಜಿಗೆ ಇಳಿಸಿದೆ, ನಾವು ಅಧಿಕಾರಕ್ಕೆ ಬಂದಾಗ ಮಹಿಳೆಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಮತ್ತು 2,000 ರೂಪಾಯಿ ನೀಡುತ್ತೇವೆ ಎಂದು ಅವರು ಹೇಳಿದರು.

Sneha Gowda

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

14 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

32 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

50 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago