ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.
2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್ ವಿಫಲವಾದ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದರು ಎಂದು ಎನ್ಐಎ ವಿಶೇಷ ಕೋರ್ಟ್ಗೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
Ad