News Karnataka Kannada
Monday, April 29 2024
ಬೆಂಗಳೂರು

ಕರಾವಳಿ, ಮಲೆನಾಡಲ್ಲಿ ಸಾಧಾರಣ ಮಳೆ : ನಗರಗಳ ತಾಪಮಾನ ಎಷ್ಟಿದೆ

ರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಆದರೆ ಬಿಸಿಲಿನ ಧಗೆ ಮತ್ತಷ್ಟು ಹೆಚ್ಚಾಗಲಿದೆ.ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆ ಇದೆ.
Photo Credit : NewsKarnataka

ಬೆಂಗಳೂರು : ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಆದರೆ ಬಿಸಿಲಿನ ಧಗೆ ಮತ್ತಷ್ಟು ಹೆಚ್ಚಾಗಲಿದೆ.ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿನ ಒಳನಾಡಿನ ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಹಗುರವಾದ ಮಳೆ ಸಂಭವ ಇದೆ. ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಅಲ್ಲಿಲ್ಲ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ 35 ಮತ್ತು ಕನಿಷ್ಠ ತಾಪಮಾನವು 21ರ ಆಸುಪಾಸಿನಲ್ಲಿರಲಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 21 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 22 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಬೆಳಗಾವಿ: 39 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು