ಆರ್ ಸಿಬಿ vs ಕೆಕೆಆರ್ : ಟಾಸ್ ಸೋತು ಬ್ಯಾಟ್ ಹಿಡಿಯಲು ನಿರ್ಧರಿಸಿದ ಆರ್ ಸಿಬಿ

ಐಪಿಎಲ್​ ೨೦೨೪ನ ಪಂದ್ಯಾವಳಿ ನಡೆಯುತ್ತಿದ್ದು, ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹೈವೋಲ್ಟೇಜ್ ನಡುವಿನ ಪಂದ್ಯಾವಳಿ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಎರಡೂ ತಂಡಗಳು ತಮ್ಮ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವುದರಲ್ಲಿ ಕಾತುರತೆಯಿಂದ ಇದ್ದು, ಲೀಗ್​ನಲ್ಲಿ ಆರ್​ಸಿಬಿಗೆ ಇದು ಮೂರನೇ ಪಂದ್ಯವಾಗಿದ್ದರೆ, ಕೆಕೆಆರ್​ಗೆ ಇದು ಎರಡನೇ ಪಂದ್ಯವಾಗಿದೆ.

ಎರಡೂ ತಂಡಗಳು ಗೆಲುವಿನೊಂದಿಗೆ ಈ ಪಂದ್ಯಕ್ಕೆ ಕಾಲಿಡುತ್ತಿರುವುದರಿಂದ ಎರಡೂ ತಂಡಗಳು ತಮ್ಮ ಗೆಲುವಿನ ಲಯವನ್ನು ಮುಂದುವರೆಸಲು ಪ್ರಯತ್ನಿಸಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲುಗೈ ಸಾಧಿಸಿದೆ. ಐಪಿಎಲ್‌ನಲ್ಲಿ ಈ ಎರಡು ತಂಡಗಳ ನಡುವೆ ಇದುವರೆಗೆ 32 ಪಂದ್ಯಗಳು ನಡೆದಿವೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 18 ಪಂದ್ಯಗಳನ್ನು ಗೆದ್ದಿದ್ದರೆ, 14 ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತ ಆರ್‌ಸಿಬಿ 14 ಪಂದ್ಯಗಳನ್ನು ಗೆದ್ದಿದ್ದರೆ, 18 ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನು ಕಳೆದ ಐದು ವರ್ಷಗಳಲ್ಲಿ ಎರಡು ತಂಡಗಳ ಮುಖಾಮುಖಿ ನೋಡುವುದಾದರೆ.. ಕಳೆದ 5 ವರ್ಷಗಳಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ 10 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಎರಡೂ ತಂಡಗಳು ತಲಾ 5 ಪಂದ್ಯಗಳನ್ನು ಗೆದ್ದಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಕ್ಯಾಮರೂನ್ ಗ್ರೀನ್, ರಜತ್ ಪಾಟೀಲ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಲ್ಜಾರಿ ಜೋಸೆಫ್, ಮಾಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಆಡಳಿದ್ದು, ಕೊಲ್ಕತ್ತತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಮಣದೀಪ್ ಸಿಂಗ್, ರಿಂಕು ಸಿಂಗ್, ಆಂಡ್ರೆ ರಸ್ಸೆಲ್, ಸುನಿಲ್ ನರೈನ್, ಮಿಚೆಲ್ ಸ್ಟಾರ್ಕ್​, ಅನುಕುಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಆಡಳಿದ್ದಾರೆ.

 

Chaitra Kulal

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

22 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

35 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

54 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

1 hour ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago