ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.

ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಿಗೂ ಅನ್ವಯವಾಗುತ್ತದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿತ್ತು. ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆಯು, ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡು ಆದೇಶ ಹೊರಡಿಸಿದೆ.

ಮಕ್ಕಳನ್ನು ಮೊಬೈಲ್ ಫೋನ್‌ಗಳ ವಿಪರೀತ ಬಳಕೆಯಿಂದ ದೂರವಿಡುವುದು ಮತ್ತು ಓದುವ ಹವ್ಯಾಸವನ್ನು ಬೆಳೆಸುವುದು. ಪ್ರಸ್ತುತ ವಿದ್ಯಮಾನಗಳು ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು. ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು ಸಿದ್ಧಗೊಳಿಸಲು ಇದು ನೆರವಾಗುತ್ತದೆ.