News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು: ಸಚಿವರ ವಿರುದ್ಧವೇ ಸ್ವಪಕ್ಷದ ಶಾಸಕ ಗರಂ

Rebel MLA slams minister
Photo Credit : News Kannada

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 6 ತಿಂಗಳಾಗಿದೆ. ಈ ನಡುವೆ ಸರ್ಕಾರದ ಒಳಜಗಳ ಹಲವು ಬಾರಿ ಬಯಲಿಗೆ ಬಂದಿದೆ.

ಈ ಹಿಂದೆ ಹಿರಿಯ ಶಾಸಕರೊಬ್ಬರು ಸಿಎಂ ಗೆ ಪತ್ರ ಬರೆದಿದ್ದು ದೊಡ್ಡ ಸುದ್ದಿಯಾಗಿತ್ತು. ಅವರನ್ನು ಸಿಎಂ ಸಮಾಧಾನ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಶಾಸಕ ಬೇಳೂರು ಸಚಿವ ಮಧು ವಿರುದ್ಧ ಗರಂ ಆಗಿದ್ದಾರೆ.

ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಅಂತ ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು‌. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು