Bengaluru 27°C
Ad

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್: ಇನ್ನೊಂದು ವಾರ ಭಾರೀ ಮಳೆ

ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೊಂದು ವಾರ ಮಳೆಯು ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೊಂದು ವಾರ ಮಳೆಯು ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಹಗುರವಾದ ವರ್ಷಧಾರೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸುತ್ತಮುತ್ತ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 30ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

Ad
Ad
Nk Channel Final 21 09 2023
Ad