ವಿದ್ಯಾರ್ಥಿ ಯುವ ಜನರ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಸದಸ್ಯರು ಲೋಕಸಭಾ ಚುನಾವಣೆಗಾಗಿ ʻವಿದ್ಯಾರ್ಥಿ-ಯುವ ಜನರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹಾಗೂ ಇದನ್ನು ಎಲ್ಲ ಪಕ್ಷಗಳು ಅನುಷ್ಠಾನಗೊಳಿಸಬೇಕು ಎಂದರು ಆಗ್ರಹಿಸಿದ್ದಾರೆ.

ʻವಿದ್ಯಾರ್ಥಿ ಯುವಜನರ ಮೇಲೆ ಪರಿಣಾಮ ಬೀರುವಶಿಕ್ಷಣ ಮತ್ತು ಉದ್ಯೋಗ ಎಂಬ ಅವಳಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬೇಡಿಕೆಗಳನ್ನು ವಿದ್ಯಾರ್ಥಿ-ಯುವಜನರ ಪ್ರಣಾಳಿಕೆ ಮುಂದಿಟ್ಟಿದೆ. ಕೊಠಾರಿ ಆಯೋಗದ ಶಿಫಾರಸಿನ ಪ್ರಕಾರ ಜಿಡಿಪಿಯ ಶೇ 6ರಷ್ಟು ಶಿಕ್ಷಣಕ್ಕೆ ಮೀಸಲಿಡಬೇಕು. ಹಾಗೂ ಇದನ್ನು ರಾಜ್ಯಪಟ್ಟಿಗೆ ಸೇರಿಸಬೇಕು ಎಂದು ವಿದ್ಯಾರ್ಥಿ ಮುಖಂಡರು ಶನಿವಾರ ಸುದ್ಧಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ʻಪರಿಶಿಷ್ಟ ಜಾತಿ ಮತ್ತು ಪಂಗಡ, ಒಬಿಸಿ ಸೇರಿದಂತೆ ಎಲ್ಲ ಸಮುದಾಯ ವಿದ್ಯಾರ್ಥಿಗಳಿಗೆ ಮೀಸಲಾತಿ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅಂಗನವಾಡಿ ಮತ್ತು ಶಾಲೆಗಳನ್ನು ಮುಚ್ಚುವ,ವಿಲೀನಗೊಳಿಸುವ ಪ್ರಯತ್ನಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿ ಜಿಲ್ಲೆಯ ದಲಿತರು, ಆದಿವಾಸಿಗಳು, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ ವಸತಿ ನಿಲವ ನರ್ಮಿಸಬೇಕು. ಎನ್‌ಇಇಟಿ ಮತ್ತು ಜೆಇಇ ಸೇರಿದಂತೆ ಕೇಂದ್ರಿಕೃತ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸಬೇಕು. ಪ್ರತಿ ಜಿಲ್ಲಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೃಜು ಮತ್ತು ಆಸ್ಪತ್ರೆ ಸ್ಥಾಪಿಸಬೇಕು ಏಮದು ಆಗ್ರಹಿಸಿದರು.

ಇದರಲ್ಲಿ ದಲಿತ ವಿದ್ಯಾರ್ಥಿ ಪರಿಷತ್‌, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಸರ್ಸ್‌, ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಅಂಬೇಡ್ಕರ್‌ ಸ್ಟೂಡೆಂಟ್‌ ಅಸೋಸಿಯೇಷನ್‌, ಸ್ಟೂಡೆಂಟ್‌ ಫಾರ್‌ ಪೀಪಲ್ಸ್‌ ಡೆಮಾಕ್ರಸಿ, ಸ್ನಾತ್ತಾಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳು ಹಾಗೂ ಮುಖಂಡರು ಭಾಗಿಯಾಗಿದ್ದರು.

Nisarga K

Recent Posts

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

8 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

8 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

32 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

35 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

54 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

1 hour ago