ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಇಂದು ಕೂಡ ಜಾಮೀನು ಸಿಗಲಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಮಂಗಳವಾರ ವಿಚಾರಣೆ ನಡೆಯಿತು. ಆಕ್ಷೇಪಣಾ ವಾದವನ್ನು ಎಸ್‌ಪಿಪಿ ಪ್ರಸನ್ನಕುಮಾರ್ ಮಂಡಿಸಿದರು. ಪವಿತ್ರಗೌಡ, ದರ್ಶನ್ ಮತ್ತು ರವಿಶಂಕರ್ ಪಾತ್ರದ ಬಗ್ಗೆ ವಾದ ಮಂಡನೆ ಮಾಡಿದರು. ಅರ್ಜಿ ವಿಚಾರಣೆಯನ್ನು 57ನೇ ಸಿಸಿಎಚ್ ಕೋರ್ಟ್ ನಾಳೆ ಮಧ್ಯಾಹ್ನ 12 ಗಂಟೆಗೆ ಮುಂದೂಡಿದೆ.

