ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್‌ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್ ಅನ್ನೋದು ಬೆಳಕಿಗೆ ಬಂದಿದೆ.

ಎಂ.ಆರ್‌ ಪುನೀತ್‌‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದಾನೆ. ರೇಣುಕಾಸ್ವಾಮಿ ಶವ ಬಿಸಾಡಲು ಕಾರು ಕೊಟ್ಟಿದ್ದೇ ಈ ಪುನೀತ್‌. ಶವ ಬಿಸಾಡಿದ ಬಳಿಕ ಕಾರನ್ನ ತೊಳೆಸಿದ್ದ. ಆ ಕಾರನ್ನ ದರ್ಶನ್‌ಗೆ ನೀಡಿದ್ದಾಗಿ, ಬಳಿಕ ರಕ್ತದ ಕಲೆ ತೊಳಿಸಿದ್ದಾಗಿಯೂ ಹೇಳಿಕೆ ನೀಡಿದ್ದ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಕರೆತಂದಿಲ್ಲ ಎಂದು ಹೇಳುವಂತೆ ಪುನೀತ್‌, ಸಂದೀಪ್‌ಗೆ ಒತ್ತಡ ಹೇರಿದ್ದ. ಈ ಬಗ್ಗೆ ಕೋರ್ಟ್‌ಗೆ ಸಂದೀಪ್‌ ಪ್ರಮಾಣ ಪತ್ರ ಸಲ್ಲಿಸಿದ್ದ.

ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಇಂದು ಮೂವರನ್ನ ಬಂಧಿಸಿದ್ದಾರೆ. ವಿಚಾರಣೆ ಮುಂದುವರಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.