Bengaluru 23°C
Ad

ನಾಗಮಂಗಲದಲ್ಲಿ ಗಲಭೆ: ಇಂದು ಬಿಜೆಪಿ ಸತ್ಯಶೋಧನಾ ತಂಡ ಭೇಟಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯ ನಡೆದ ಅಹಿತಕರ ಘಟನಾ ಸ್ಥಳಕ್ಕೆ ಇಂದು ಬಿಜೆಪಿ ಸತ್ಯಶೋಧನಾ ತಂಡ ಭೇಟಿ ನೀಡಲಿದೆ.

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯ ನಡೆದ ಅಹಿತಕರ ಘಟನಾ ಸ್ಥಳಕ್ಕೆ ಇಂದು ಬಿಜೆಪಿ ಸತ್ಯಶೋಧನಾ ತಂಡ ಭೇಟಿ ನೀಡಲಿದೆ.

ರಾಜ್ಯ ಬಿಜೆಪಿ ನಾಯಕರು ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಮಾಜಿ ಸಚಿವರಾದ ಭೈತತಿ ಬಸವರಾಜ್‌, ಕೆಸಿ ನಾರಾಯಣ ಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ ಗೌಡ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರನ್ನು ಒಳಗೊಂಡಿದೆ.

ನಾಗಮಂಗಲದಲ್ಲಿ ಕೆಲ ದಿನಗಳ ಹಿಂದೆ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕೆಲ ಯುವಕರಿಂದ ಆದಂತಹ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿಯಿಂದ ಸತ್ಯಶೋಧನಾ ತಂಡ ರಚಿಸಲಾಗಿದೆ. ಐವರ ಸಮಿತಿ ರಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘಟನಾ ಸ್ಥಳಕ್ಕೆ ತೆರಳಿ, ಪರಿಶೀಲಿಸಿ, ಸಮಗ್ರ ವರದಿಯನ್ನು ಒಂದು ವಾರದೊಳಗೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.

Ad
Ad
Nk Channel Final 21 09 2023