Ad

ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತ ಏರಿಕೆ: ಸಿಎಂ ಗರಂ

ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. 

ಬೆಂಗಳೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Ad
300x250 2

ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾಸಭೆಯಲ್ಲಿ ಮಾತನಾಡಿರುವ ಅವರು, ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ. ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗಿಯುದಿಲ್ಲ. ರಸ್ತೆಗಳಿದು ಸುರಕ್ಷತೆ ಕ್ರಮಗಳನ್ನು ಪರಿಶೀಲಿಸಬೇಕು ಎಂದು ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಗಳಲ್ಲಿರುವ ರಸ್ತೆ ಸುರಕ್ಷಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು ಎಂದರು.

 

Ad
Ad
Nk Channel Final 21 09 2023
Ad