ಬೆಂಗಳೂರು

ಭ್ರೂಣ ಹತ್ಯೆ  ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ.  ಹೀಗಾಗಿ ಆರೋಗ್ಯ ಇಲಾಖೆ  ಭ್ರೂಣ ಹತ್ಯೆ ಸಂಪೂರ್ಣ ನೆಲಸಮ ಮಾಡಲು ಮುಂದಾಗಿದ್ದು ರಾಜ್ಯದಲ್ಲಿ ಭ್ರೂಣ ಹತ್ಯೆ  ಸುಳಿವು ನೀಡಿದವರಿಗೆ ₹1 ಲಕ್ಷ ನಗದು ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿದೆ.

ರಾಜ್ಯದ ಜನರನ್ನೇ ದಾಳವಾಗಿಸಿಕೊಂಡು ಭ್ರೂಣ ಹತ್ಯೆಯನ್ನು ಬುಡಸಮೇತ ಕಿತ್ತು ಹಾಕಲು ಮುಂದಾಗಿದೆ.

ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯುವ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ. ಯಾವುದೇ ಭಾಗದಲ್ಲಿ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ರೆ ಸಾಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಹೆಲ್ಪ್ ಲೈನ್ ತೆರೆದಿದ್ದು 080- 25202264/65 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ.

ಇನ್ನು ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ಹೊಸ ನೀತಿ ರೂಪಿಸುವುದು, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago