2,000 ರೂ. ನೋಟು ಬಂದ್‌: ಸೆ.30ರ ತನಕ ನೋಟು ಬದಲಾಯಿಸಲು ಸಮಯಾವಕಾಶ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಆರ್‌ಬಿಐ 2,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂದೆಗೆದುಕೊಂಡಿದೆ. ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿವೆ. ಜನರು ತಮ್ಮ ಬಳಿಯಿರುವ ನೋಟುಗಳನ್ನು ಸೆ.39ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಬಹುದು.

ಈಗ ಚಲಾವಣೆಯಲ್ಲಿರುವ 2,000ರೂ ಮುಖಬೆಲೆಯ ನೋಟುಗಳಲ್ಲಿ ಶೇ. 89ರಷ್ಟು ನೋಟುಗಳನ್ನು 2017ರ ಮಾರ್ಚ್​ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದಂಥವು. ಇವುಗಳ ಕಾಲಾವಧಿ 4-5 ವರ್ಷ ಮಾತ್ರ. ಹೀಗಾಗಿ, ಈ ನೋಟುಗಳನ್ನು ಹಿಂಪಡೆಯಲಾಗುತ್ತಿದೆ. 2,000 ರೂ ಮುಖಬೆಲೆಯ ನೋಟುಗಳು ಹೆಚ್ಚು ಚಲಾವಣೆಯಲ್ಲಿ ಇಲ್ಲದಿರುವುದು, ಜನರ ಹಣ ವಹಿವಾಟಿನ ಅಗತ್ಯಕ್ಕೆ ಬೇರೆ ಕರೆನ್ಸಿಗಳು ಸಾಕಷ್ಟು ಇರುವುದು ಚಲಾವಣೆಯಿಂದ ಹಿಂಪಡೆಯಲು ಕಾರಣ. ಎಟಿಎಂಗಳಲ್ಲಿ ಈ ನೋಟುಗಳು ಬರುವುದು ನಿಂತುಹೋಗಿ ಬಹುಕಾಲ ಆಯಿತು.

2018,ಮಾರ್ಚ್ 31ಕ್ಕಾಗುವಾಗ 2,000 ರೂ. ಮುಖಬೆಲೆಯ ನೋಟುಗಳ ಒಟ್ಟು ಮೌಲ್ಯ 6.73 ಲಕ್ಷ ಕೋಟಿ ರೂ. ಇತ್ತು. ಎಲ್ಲ ಕರೆನ್ಸಿ ನೋಟುಗಳ ಒಟ್ಟು ಮೊತ್ತದ ಶೇ. 37.3 ರಷ್ಟು ನೋಟುಗಳು 2,000 ರೂ ಮುಖಬೆಲೆಯದ್ದಾಗಿದ್ದವು. ಈ ಸಂಖ್ಯೆಯು 2023 ಮಾರ್ಚ್ 31ಕ್ಕೆ ಶೇ. 10.8ಕ್ಕೆ ಬಂದಿಳಿದಿದೆ.
ಅಲ್ಲದೇ ಜನರೂ ಕೂಡ 2,000 ರೂ ನೋಟಿನ ಚಲಾವಣೆಯನ್ನೂ ತೀರಾ ಕಡಿಮೆ ಮಾಡಿದ್ದಾರೆ. 500 ರೂ ಮುಖಬೆಲೆಯ ನೋಟುಗಳಿಗೆ ಹೆಚ್ಚು ಬೇಡಿಕೆ ಇದೆ. ಬ್ಯಾಂಕುಗಳಲ್ಲಿ ಒಂದು ಸಲ ಬ್ಯಾಂಕ್‌ಗಳಲ್ಲಿ 20,000 ರೂ. ಮಾತ್ರ  ಬದಲಾಯಿಸಿಕೊಳ್ಳಬಹುದು

Ashika S

Recent Posts

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

23 mins ago

ವಿಶ್ವಕಪ್‌ ಗೆದ್ದರೆ, ತಂಡದ ಪ್ರತಿ ಆಟಗಾರನಿಗೆ 1 ಲಕ್ಷ US ಡಾಲರ್‌ ಘೋಷಣೆ ಮಾಡಿದ ಪಾಕ್‌

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್‌ ಆಟಗಾರರಿಗೆ ಬಂಪರ್‌ ಬಹುಮಾನ ಘೋಷಣೆ ಮಾಡಿದೆ. 

24 mins ago

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

48 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

54 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

1 hour ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

1 hour ago