Bengaluru 24°C
Ad

ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಹೆಚ್ಚಿಸಿದ ಸರ್ಕಾರ

ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯನ್ನು ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯನ್ನು ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ.

2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ. 2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ 15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

2023 ರ ಮಾರ್ಚ್ 01 ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

Ad
Ad
Nk Channel Final 21 09 2023
Ad