ಬೆಂಗಳೂರು : ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಲ್ಲಿ ಮಾಂಸ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ.
ಈ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನಿಯಮಗಳನ್ನು ಮೀರಿ ಯಾರಾದರೂ ಮಾಂಸ ಮಾರಾಟ ಹಾಗೂ ಪ್ರಾಣಿವಧೆ ಮಾಡಿದರೆ ಭಾರೀ ದಂಡ ವಿಧಿಸಲಾಗುವುದು ಎಂದು GBA ಹೇಳಿದೆ. ಅಲ್ಲದೆ ಗಾಂಧಿ ಜಯಂತಿಯಂದು ಅಧಿಕಾರಿಗಳ ತಂಡ ಗಸ್ತು ತಿರುಗಲಿದೆ ಎಂದು ಎಚ್ಚರಿಸಲಾಗಿದೆ.

