Bengaluru 27°C

ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಲೀಂ ಅಹ್ಮದ್

ಸಲೀಂ ಅಹ್ಮದ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟ ವಿಚಾರ, ಕಾಂಗ್ರೆಸ್ ಪಡೆ ಕೆರಳಿ ಕೆಂಡವಾಗುವಂತೆ ಮಾಡಿದೆ.


ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ಇಡೀ ಪಕ್ಷ ಷಡ್ಯಂತ್ರಕ್ಕೆ ಸವಾಲು ಎಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಬೆಂಕಿ ಹಚ್ಚಿ, ದಿಕ್ಕಾರ ಕೂಗಿ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದರ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.


ಒಬ್ಬ ಅಯೋಗ್ಯ, ಬೇಜವಾಬ್ದಾರಿ ಗವರ್ನರ್​. ಯಾವುದೇ ದಾಖಲೆ ಇಲ್ಲದೇ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ನಾವು ಸುಮ್ಮನೆ ಕೂರಲ್ಲ, ಹೋರಾಟ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ. ಇನ್ನು ಮತ್ತೊಂದೆಡೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಏಜೆಂಟ್ ಆಗಿ ಗವರ್ನರ್ ಕೆಲಸ ಮಾಡ್ತಿದ್ದಾರೆ. ಅವರು ಗವರ್ನರ್ ಅಲ್ಲ, ಇವರು ನಾಲಾಯಕ್ ಗವರ್ನರ್, ಬಿಜೆಪಿ ಏಜೆಂಟ್. ನಾಲಾಯಕ್ ಗವರ್ನರ್​ಗೆ ಧಿಕ್ಕಾರ. ಇವರು ಇಲ್ಲಿ ರಾಜ್ಯಪಾಲ ಆಗುವುದಕ್ಕೆ ಯೋಗ್ಯರಲ್ಲ. ತೊಲಗಿ ತೊಲಗಿ ರಾಜ್ಯಪಾಲರೇ ತೊಲಗಿ. ರಾಜ್ಯಪಾಲರಿಗೆ ಮಾನ ಮರ್ಯಾದೆ ನಾಚಿಕೆ ಇದೆಯಾ? ಸಂವಿಧಾನದ ಬಗ್ಗೆ ಗೌರವ ಇದೆಯಾ? ಎಂದು ಕೆಂಡಕಾರಿದ್ದಾರೆ.


Nk Channel Final 21 09 2023